ಮೈಸೂರು ಹಾಗೂ ಬೆಂಗಳೂರು ಆಕಾಶವಾಣಿ ಕೇಂದ್ರಗಳಿಂದ ಪ್ರಸಾರವಾದ ಹಾಗೂ ಕೆ.ವಿ. ಸುಬ್ಬಣ್ಣ ಅವರು ಬರೆದ ರೂಪಕಗಳ ಸಂಗ್ರಹವೇ -ಅವರು ನೀಡಿದ ದೀಪ. ತಂದೀನಿ ದೀಪಾನ ಕೊಳ್ಳಿರಯ್ಯ, ಸತ್ಹುಟ್ಟೋ ಗಂಡನ್ನ ಒಲ್ಲೆ ಕಾಣೆ ತಾಯಿ, ಹೂವಿಗೂ, ಹೆಣ್ಣಿಗೂ ಸೂತಕಿಲ್ಲಲೆ ಬಾಲೆ, ಹಾಲಿನ ಕೂಡ ಹಾಲ ಹದಮಾಡೆ, ಸೀರೆಯಂತಾದು ಸೀರೆನುಡುವಳೆಂಥವಳು ಸೇರಿದಂತೆ 12 ರೂಪಕಗಳನ್ನು ಕೃತಿ ಒಳಗೊಂಡಿವೆ.
ಕೆ.ವಿ. ಸುಬ್ಬಣ್ಣ ಕನ್ನಡದ ಅಪರೂಪದ ವ್ಯಕ್ತಿಗಳಲ್ಲಿ ಒಬ್ಬರು. ಮೈಸೂರು ವಿಶ್ವವಿದ್ಯಾನಿಲಯದಿಂದ ಎಂ. ಎ. ಪದವಿ ಪಡೆದ ನಂತರ ಅವರು ಕೃಷಿಕಾಯಕ ಆರಂಭಿಸಿದರು. ಸಾಹಿತ್ಯ ಕ್ಷೇತ್ರದಲ್ಲಿ ಅವರು ಮಾಡಿದ ಸಾಧನೆ ಅಚ್ಚರಿಪಡುವ ಹಾಗಿದೆ. ಕವಿ, ನಾಟಕಕಾರ, ಅನುವಾದಕರಾಗಿದ್ದ ಅವರು 'ಅಕ್ಷರ ಪ್ರಕಾಶನ' 'ನೀನಾಸಂ ರಂಗ ಚಟುವಟಿಕೆ'ಗಳನ್ನು ನಿರ್ವಹಿಸಿದವರು. ಭಾರತೀಯ ಸಂಸ್ಕೃತಿಗೆ ವಿಶಿಷ್ಟ ಮಾದರಿ ಎನ್ನುವ ಹಾಗೆ ಸಾಹಿತ್ಯಕ, ಸಾಂಸ್ಕೃತಿಕ ಚಟುವಟಿಕೆಗಳನ್ನು ಪುಟ್ಟಹಳ್ಳಿಯಲ್ಲಿ ನಡೆಸಿದ್ದು ಒಂದು ದಾಖಲೆ. ಮ್ಯಾಗ್ಸೆಸ್ಸೆ ಪ್ರಶಸ್ತಿಯಿಂದ ಹೆಗ್ಗೋಡು ಅಂತರರಾಷ್ಟ್ರೀಯ ನಕ್ಷೆಯಲ್ಲಿ ದಾಖಲಾಯಿತು. ಕೆ.ವಿ. ಸುಬ್ಬಣ್ಣ ಒಬ್ಬ ವ್ಯಕ್ತಿಯಲ್ಲ, ಮಹಾನ್ ಶಕ್ತಿ. ಅವರ ಬೆಳವಣಿಗೆ ವೈಯಕ್ತಿಕವಾದದ್ದಲ್ಲ, ಸಾಂಘಿಕವಾದದ್ದು. 'ಅಕ್ಷರ ಪ್ರಕಾಶನದ ಮೂಲಕ , 'ನೀನಾಸಂ' ಮೂಲಕ ಅನೇಕ ಪ್ರತಿಭೆಗಳನ್ನು ಅವರು ...
READ MORE