ಮಾಲತಿ ಮುದಕವಿ ಅವರ ಅನುವಾದ ಕಥಾ ಸಂಕಲನ ಮರಾಠಿಯಿಂದ ಕನ್ನಡಕ್ಕೆ ಅನುವಾದಿತ ಆಯ್ದ ಹತ್ತು ಕಥೆಗಳು. ಅನುವಾದದಲ್ಲಿಯೂ ಮಾಲತಿಯವರದು ಪ್ರಬುದ್ಧ ಬರವಣಿಗೆ. ಈ ಕಥಾ ಸಂಕಲನವು ಒಟ್ಟು ಹತ್ತು ಕಥೆಗಳನ್ನೊಳಗೊಂಡಿದ್ದು ಖ್ಯಾತ ಮರಾಠಿ ಲೇಖಕರ ಕಥೆಗಳನ್ನು ಕನ್ನಡಿಗರಿಗೆ ಓದಲು ಇಲ್ಲಿ ಅನುವು ಮಾಡಿಕೊಟ್ಟಿದ್ದಾರೆ.
ಲೇಖಕಿ ಮಾಲತಿ ಮುದಕವಿ ಅವರು ಎಂ ಎ., ಬಿ ಎಡ್ ಪದವೀಧರರು. ನಿವೃತ್ತ ಕನ್ನಡ ಉಪನ್ಯಾಸಕಿ. ಕರ್ನಾಟಕ ರಾಜ್ಯ ಮಟ್ಟದ ‘ನಗೆಮುಗುಳು’ ಏರ್ಪಡಿಸಿದ್ದ ಹಾಸ್ಯ ಲೇಖನ ಸ್ಪರ್ಧೆಯಲ್ಲಿ ಹಾಗೂ ಮುಂಬೈ ಕನ್ನಡಿಗರ ಹಾಸ್ಯ ಲೇಖನ ಸ್ಪರ್ಧೆಯಲ್ಲಿಯೂ ಪ್ರಥಮ ಬಹುಮಾನ. ಸುಧಾ ಯುಗಾದಿ 2016ರ ಹಾಸ್ಯ ಲೇಖನ ಸ್ಪರ್ಧೆಯಲ್ಲಿ ತೃತೀಯ ಬಹುಮಾನ. ಆಕಾಶವಾಣಿಯಲ್ಲಿ ಕೂಡ ಅನೇಕ ಚರ್ಚೆಗಳು, ನಾಟಕ ರಚನೆ, ವಿಮರ್ಶೆ, ಪ್ರಬಂಧ ವಾಚನ ಕಾರ್ಯ ಕ್ರಮಗಳಲ್ಲಿ ಭಾಗವಹಿಸುವಿಕೆ. ಶ್ರೀ ಬಸವರಾಜ ಕಟ್ಟಿಮನಿಯವರ ಶತಮಾನೋತ್ಸವದ ಪ್ರಯುಕ್ತ 'ಸಾಹಿತ್ಯಶ್ರೀ' ಎಂಬ ಪುರಸ್ಕಾರ. ಲೇಖಿಕಾ ಸಾಹಿತ್ಯ ವೇದಿಕೆಯ 2020ರ ಎರಡು ರಾಜ್ಯ ಮಟ್ಟದ ಸ್ಪರ್ಧೆಗಳಾದ ...
READ MORE