ಕಾಂತಾವರ ಕನ್ನಡ ಸಂಘದ 'ನಾಡಿಗೆ ನಮಸ್ಕಾರ’ ಸಾಹಿತ್ಯ ಸಂಸ್ಕೃತಿ ಚಿಂತನ ಗ್ರಂಥಮಾಲೆಯ 293ನೇ ಪುಸ್ತಕ ‘ಬೋಳೂರು ಹರಿಶ್ಚಂದ್ರ ಆಚಾರ್ಯ’. ಬೋಳೂರು ಹರಿಶ್ಚಂದ್ರ ಆಚಾರ್ಯರು ವಿಶ್ವಬ್ರಾಹ್ಮಣ ಸಮುದಾಯದ ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ, ಸಾಂಸ್ಕೃತಿಕ ಜಾಗೃತಿಗಾಗಿ ಶ್ರಮಿಸಿದವರಲ್ಲಿ ಪ್ರಮುಖರು. ಮಂಗಳೂರಿನಲ್ಲಿ ಶಿಕ್ಷಕರಾಗಿದ್ದ ಅವರು ಕರಾವಳಿಯ ವಿಶ್ವಕರ್ಮರ ಉನ್ನತಿಗಾಗಿ ಶ್ರಮಿಸಿದ್ದಾರೆ. ಅವರ ಜೀನವ ಕುರಿತ ಸಂಕ್ಷಿಪ್ತ ವಿವರ ಇಲ್ಲಿ ಸಿಗುತ್ತದೆ.