ರಂಗಸಾಗರ ಬಿ.ವಿ. ಕಾರಂತರು ದೇಶದ ಖ್ಯಾತ ಚಲನಚಿತ್ರ ನಿರ್ದೇಶಕ ಹಾಗೂ ರಂಗಭೂಮಿಯ ಭೀಷ್ಮ. ಬಾಬುಕೋಡಿ ವೆಂಕಟರಮಣ ಕಾರಂತರು (1928-2002) ದಕ್ಷಿಣ ಕನ್ನಡದವರು. ಕನ್ನಡ ಮತ್ತು ಹಿಂದಿ ಭಾಷೆಗಳಲ್ಲಿ ಅದ್ಭುತವೆನ್ನಬಹುದಾದ ಚಲನಚಿತ್ರಗಳು, ರಂಗಕೃತಿಗಳು, ರಂಗಸಂಗೀತವನ್ನು ಸೃಷ್ಟಿಸಿದ ಪದ್ಮಶ್ರೀ ಬಿ.ವಿ. ಕಾರಂತರು, ದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕ ರಾಗಿದ್ದವರು. ಮಧ್ಯಪ್ರದೇಶದ ರಂಗಮಂಡಲ ಮತ್ತು ಮೈಸೂರಿನ ರಂಗಾಯಣಗಳ ಮೂಲಕ ದೇಶದ ರಂಗಭೂಮಿಗೆ ಹೊಸ ಚಿಂತನೆಗಳನ್ನು ಮತ್ತು ಆಯಾಮಗಳನ್ನು ನೀಡಿದ ಬಿ.ವಿ. ಕಾರಂತರ ಬದುಕು-ಸಾಧನೆಯನ್ನು ಸಂಕ್ಷಿಪ್ತವಾಗಿ ಈ ಕೃತಿಯಲ್ಲಿ ತೆರೆದಿಟ್ಟಿದ್ದಾರೆ ಲೇಖಕ ರುದ್ರೇಶ್ ಬಿ. ಅದರಂಗಿ. ಸಾಹಿತಿ ನಾ. ಸೋಮೇಶ್ವರ ಸಂಪಾದಿಸಿದ್ದಾರೆ.
ನಾ. ಸೋಮೇಶ್ವರ ಮೇ 14 1955 ರಲ್ಲಿ ಬೆಂಗಳೂರಿನಲ್ಲಿ ಜನಿಸಿದರು. ತಂದೆ ನಾರಪ್ಪ ಹಾಗೂ ತಾಯಿ ಅಂಜನಾ. ವಿದ್ಯಾರ್ಥಿಯಾಗಿದ್ದಾಗಲೇ 'ಜೀವನಂದಿ' ಎಂಬ ಮಾಸಿಕ ಪತ್ರಿಕೆಯನ್ನು ಪ್ರಕಟಿಸಿದ್ದರು. ತಮ್ಮ ಬಿ.ಎಸ್.ಸಿ ಪದವಿಯ ಬಳಿಕ, ಎಮ್.ಬಿ.ಬಿ.ಎಸ್ ಪದವಿಯನ್ನು ಗಳಿಸಿದರು. ವೃತ್ತಿಯಿಂದ ವೈದ್ಯರಾದ ಸೋಮೇಶ್ವರರು ಒಂದು ಫಾರ್ಮಸ್ಯೂಟಿಕಲ್ ಕಂಪೆನಿಗೆಸಲಹೆಗಾರರಾಗಿ ಕಾರ್ಯನಿರ್ವಹಿಸಿದರು. ಡಾ. ಸೋಮೆಶ್ವರ ಚಂದನ ಟೆಲಿವಿಷನ್ ವಾಹಿನಿಯಲ್ಲಿ ’ಥಟ್ ಅಂತ ಹೇಳಿ’ ಎನ್ನುವ ಕನ್ನಡ ಕ್ವಿಜ್ ಕಾರ್ಯಕ್ರಮದ ರೂವಾರಿಯಾಗಿ ಪ್ರಸಿದ್ಧರಾದವರು. ವೃತ್ತಿಯಿಂದ ವೈದ್ಯರಾಗಿ ಪ್ರವೃತ್ತಿಯಿಂದ ಲೇಖಕರಾಗಿ ಅನೇಕ ಪುಸ್ತಕಗಳನ್ನು ರಚಿಸಿದ್ದಾರೆ. ಅನಂತದೆಡೆಗೆ, ಓ ನನ್ನ ಚೇತನ, ದೈಹಿಕ ಸ್ವಚ್ಛತೆ, ತಲ್ಲಣಿಸದಿರು ಕಂಡ್ಯ ತಾಳು ಮನವೆ, ಅದೃಶ್ಯ ಲೋಕದ ಅಗೋಚರ ಜೀವಿಗಳು, ನಮ್ಮ ದಿನನಿತ್ಯದ ಆಹಾರ, ಹೀಗೆ ಮೂವತ್ತಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ. 2003 ರಲ್ಲಿ ವೈದ್ಯ ಸಾಹಿತ್ಯ ಪ್ರಶಸ್ತಿ, ಡಾಕ್ಟರ್ಸ್ ಡೇ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ...
READ MORE