ಮಂಕುತಿಮ್ಮನ ಕಗ್ಗ ಮೂಲಕ ಸಂಸ್ಕೃತಿ, ಮೌಲ್ಯ, ಅಧ್ಯಾತ್ಮ, ತಾತ್ವಿಕ ಚಿಂತನೆ, ಜೀವನದರ್ಶನಗಳನ್ನು ಮಾಡಿಸಿದ ಹಿರಿಯ ಸಾಹಿತಿ ಡಿ.ವಿ.ಜಿ. ಅವರು ಉತ್ತಮ ಚಿಂತನೆಯ ಹತ್ತು ಹಲವು ಕೃತಿಗಳನ್ನು ಬರೆದಿದ್ದು, ಆ ಪೈಕಿ `ಬಾಳಿಗೊಂದು ನಂಬಿಕೆ' ಕೃತಿಯೂ ಒಂದು. ಜೀವನದಲ್ಲಿ ನಂಬಿಕೆಯು ಬಹು ಮಹತ್ವದ ಪಾತ್ರವಹಿಸುತ್ತದೆ. ಅದು ಮೌಢ್ಯದ ಪ್ರತೀಕವಲ್ಲ ಎಂದು ಪ್ರತಿಪಾದಿಸುವ ಅವರ ಚಿಂತನೆಗಳು, ರಾಮಾಯಣ, ಮಹಾಭಾರತ ಸೇರಿದಂತೆ ಸನಾತನ ಗ್ರಂಥಗಳ ಜ್ಞಾನವನ್ನು ತಮ್ನ ಸಮರ್ಥನೆಯ ತಳಹದಿಯನ್ನಾಗಿ ಮಾಡಿಕೊಂಡಿದ್ದು, ಅವರ ವಿಸ್ತೃತವಾದ ಜ್ಞಾನದ, ಆಳ ಅಧ್ಯಯನದ ಸೂಚಕಗಳಾಗಿ ಓದುಗರನ್ನು ಸೆಳೆಯುತ್ತವೆ.
ಮಂಕುತಿಮ್ಮನ ಕಗ್ಗ ಕಾವ್ಯದಿಂದ ಲೋಕವಿಖ್ಯಾತರಾದ ಡಿವಿಜಿ ಅವರು (ದೇವನಹಳ್ಳಿ ವೆಂಕಟರಮಣಯ್ಯ ಗುಂಡಪ್ಪ) ಲೇಖಕ- ಪತ್ರಕರ್ತ. ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ 1887ರ ಮಾರ್ಚ್ 17ರಂದು ಜನಿಸಿದ ಗುಂಡಪ್ಪ ಅವರು ಪ್ರೌಢಾಶಾಲಾ ಶಿಕ್ಷಣವನ್ನು ಮೈಸೂರು ಮಹಾರಾಜ ಪ್ರೌಢಶಾಲೆಯಲ್ಲಿ ಪಡೆದರು. ಮೆಟ್ರಿಕ್ ಪರೀಕ್ಷೆಯಲ್ಲಿ ಉತ್ತೀರ್ಣರಾಗದಿದ್ದರೂ ಸ್ವಂತ ಅಧ್ಯಯನದಿಂದ ಕನ್ನಡ, ಸಂಸ್ಕೃತ, ಇಂಗ್ಲಿಷ್ ಭಾಷೆಗಳಲ್ಲಿ ಪರಿಣತರಾಗಿದ್ದರು. ಮುಳುಬಾಗಿಲಿನ ಒಂದು ಶಾಲೆಯಲ್ಲಿ ಕೆಲವು ಕಾಲ ಬದಲಿ ಅಧ್ಯಾಪಕರಾಗಿ ಕಾರ್ಯ ನಿರ್ವಹಿಸಿದರು. ಅನಂತರ ಕೋಲಾರದ ಸೋಡಾ ಫ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡಿ ಬೇಸತ್ತು ಬೆಂಗಳೂರಿನಲ್ಲಿ ಜಟಕಾಬಂಡಿಗೆ ಬಣ್ಣ ಬಳಿಯುವ ಕಾರ್ಖಾನೆಯಲ್ಲಿ ಕೆಲಕಾಲ ಕೆಲಸ ಮಾಡಿದರು. ಅನಂತರ ಪತ್ರಿಕಾರಂಗ ...
READ MORE