ಬಾನು ಬೆಳಗಿತು

Author : ತ್ರಿವೇಣಿ

Pages 147

₹ 81.00




Year of Publication: 2014
Published by: ತ್ರಿವೇಣಿ ಪಬ್ಲಿಕೇಷನ್ಸ್
Address: #1195, ಬಾಲಕೃಷ್ಣರಾವ್ ರಸ್ತೆ, ಚಾಮರಾಜಪುರಂ, ಮೈಸೂರು-570005

Synopsys

ಬಾನು ಬೆಳಗಿತು-ತ್ರಿವೇಣಿ ಅವರು ಬರೆದ ಕಾದಂಬರಿ. 1958ರಲ್ಲಿ ಮೈಸೂರಿನ ಶಾರದಾ ಮಂದಿರ ಪ್ರಕಾಶನವು ಮೊದಲು ಪ್ರಕಟಿಸಿತ್ತು. ಇದಕ್ಕೂ ಮುನ್ನ ಪ್ರಜಾವಾಣಿ ದಿನಪತ್ರಿಕೆಯಲ್ಲಿ ಧಾರಾವಾಹಿಯಾಗಿ ಈ ಕಾದಂಬರಿ ಪ್ರಕಟಗೊಂಡಿತ್ತು. ಸಮಯ ಸರಿದಂತೆ ದಾಂಪತ್ಯದಲ್ಲಿ ಪ್ರೇಮದ ತೀವ್ರತೆಯು ಕಡಿಮೆಯಾಗುತ್ತದೆ ಎಂಬುದನ್ನು ಸಹಜವಾಗಿ, ಸರಳವಾಗಿ ವಿವರಿಸುವ ಕಥಾವಸ್ತು ಈ ಕಾದಂಬರಿ ಒಳಗೊಂಡಿದೆ.

About the Author

ತ್ರಿವೇಣಿ
(29 July 1963 - 05 July 1963)

ತ್ರಿವೇಣಿ ಎಂಬ ಬರಹನಾಮದಿಂದ ಪ್ರಸಿದ್ದರಾದ ಅನುಸೂಯ ಶಂಕರ್ ರವರು ಕನ್ನಡದ ಪ್ರಮುಖ ಲೇಖಕಿಯರಲ್ಲಿ ಒಬ್ಬರು.  ತಂದೆ ಬಿ.ಎಮ್. ಕೃಷ್ಣಸ್ವಾಮಿ, ತಾಯಿ ತಂಗಮ್ಮ ಇವರ ಮಗಳಾಗಿ 1928 ರ ಸೆಪ್ಟಂಬರ್ 1 ರಂದು ಮೈಸೂರಿನಲ್ಲಿ ಇವರು ಜನಿಸಿದರು. ಹೈಸ್ಕೂಲ್ ವರೆಗಿನ ಶಿಕ್ಷಣ ಮಂಡ್ಯದಲ್ಲಿ ಹಾಗೂ ಕಾಲೇಜು ಶಿಕ್ಷಣ ಮೈಸೂರಿನಲ್ಲಿ ಆಯಿತು. 1947ರಲ್ಲಿ ಮಹಾರಾಜಾ ಕಾಲೇಜಿನಿಂದ ಮನ:ಶಾಸ್ತ್ರದಲ್ಲಿ ಚಿನ್ನದ ಪದಕದೊಂದಿಗೆ ಬಿ.ಎ.ಪದವಿ ಪಡೆದರು. ಕನ್ನಡದ ಕಣ್ವ ಬಿ.ಎಂ.ಶ್ರೀಯವರ ಸೋದರನ ಪುತ್ರಿಯಾಗಿದ್ದ ತ್ರಿವೇಣಿಯವರು ಸ್ತ್ರೀಯರು ಹೆಚ್ಚಾಗಿ ಬರೆಯದೇ ಇದ್ದ ಕಾಲದಲ್ಲಿ ಬರವಣಿಗೆ ಪ್ರಾರಂಬಿಸಿ ಕೆಲವೇ ವರ್ಷಗಳಲ್ಲಿ ಅಸಾಧಾರಣ ಜನಪ್ರಿಯತೆಯನ್ನು ಗಳಿಸಿದರು. 1953 ರಲ್ಲಿ ತ್ರಿವೇಣಿಯವರ ಮೊದಲನೆಯ ಕಾದಂಬರಿ ಪ್ರಕಟವಾಯಿತು. ಹತ್ತು ವರ್ಷಗಳಲ್ಲಿ ...

READ MORE

Related Books