ಲೇಖಕ ಧನಪಾಲ ನಾಗರಾಜಪ್ಪ ಅವರ ಅನುವಾದಿತ ಕೃತಿ.; ʻಬದರ್ʼ ಮೂಲ ತೆಲುಗು ಲೇಖಕ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ಷೇಕ್ ಕರೀಮುಲ್ಲಾ. ಕೆಳ ಮತ್ತು ಮಧ್ಯಮ ವರ್ಗದ ಮುಸಲ್ಮಾನರ ಬದುಕಿನ ಬವಣೆಗಳೇ ಕುರಿತ 100 ಅಬಾಬಿಗಳನ್ನು ಒಳಗೊಂಡಿದೆ. ʻಅಬಾಬಿಗಳುʼ ಎಂಬುದು ಹೊಸ ರೀತಿಯ ಕಾವ್ಯ ಪ್ರಕಾರ. ಪ್ರತಿ ಅಬಾಬಿಯೂ ಐದು ಸಾಲುಗಳನ್ನು ಹೊಂದಿರುತ್ತವೆ. ಸಮಸ್ಯೆ, ವಿಷಯ ವಿಶ್ಲೇಷಣೆ, ವಿವರಣೆ, ಆತ್ಮಾವಲೋಕನ, ಸಂದೇಶ ಇಲ್ಲವೆ ವ್ಯಂಗ್ಯವಾದ ವಿಡಂಬನೆಯಿಂದ ಅಬಾಬಿಗಳು ಮುಗಿಯುತ್ತವೆ.
ಕೃತಿಗೆ ಬೆನ್ನುಡಿ ಬರೆದ ಡಾ. ಮೈತ್ರೇಯಿಣಿ ಗದಿಗೆಪ್ಪಗೌಡರ,ʻ ಅಬಾಬಿಗಳು ನಮ್ಮ ಮನದಾಳದ ಮತೀಯ ಮೌಢ್ಯ ವರ್ಗ ಸಂಘರ್ಷಗಳ ಬೇರುಗಳನ್ನು ಕಿತ್ತು ಹಾಕಿ ಮಾನವೀಯತೆಯ ತಳಪಾಯದಲ್ಲಿ ನಿಲ್ಲುವ ನುಡಿಗಳಾಗಿವೆ. ಆತ್ಮಾವಲೋಕನ ಮತ್ತು ಆತ್ಮಾನುಸಂಧಾನದ ಮಾದರಿಗಳಾದ ಅಬಾಬಿಗಳು, ಹೊಸ ಚೈತನ್ಯಶೀಲ ಬದುಕಿಗೆ ದಾರಿದೀಪಗಳಾಗಿವೆʼ. ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಧನಪಾಲ ನಾಗರಾಜಪ್ಪನವರು ಅನುವಾದಕರಾಗಿ ಚಿರಪರಿಚಿತರು. ನಾಗರಾಜಪ್ಪ ಹಾಗೂ ರಾಮಚಂದ್ರಮ್ಮ ದಂಪತಿಯ ಮಗನಾಗಿ 20-06-1987 ರಂದು ಅವಿಭಜಿತ ಕೋಲಾರ ಜಿಲ್ಲೆಯ ಚಿಂತಾಮಣಿ ಪಟ್ಟಣದಲ್ಲಿ. ಜನಿಸಿದರು. ಭಾರತೀಯ ವಾಯು ಸೈನ್ಯದಲ್ಲಿ PBOR ಶ್ರೇಣಿಯಲ್ಲಿ ಕಳೆದ 15 ವರ್ಷಗಳಿಂದ ಏರ್ ಮೆನ್ ಆಗಿ ವೈದ್ಯಕೀಯ ಸಹಾಯಕನ ವೃತ್ತಿ. ಕಳೆದ 15 ವರ್ಷಗಳಿಂದ ಸಾಹಿತ್ಯಿಕ ಕೃಷಿಯಲ್ಲಿ ನಿರತನಾಗಿದ್ದು ಸ್ವ ರಚನೆ, ಸಂಪಾದನೆ, ಪ್ರಕಾಶನ ಮತ್ತು ಅನುವಾದದ ವಿಭಾಗಗಳಲ್ಲಿ ಕೆಲಸ ಮಾಡಿದ್ದಾರೆ. ನಿವೇದನೆ (ಕವನ ಸಂಕಲನ), ಮಿತ್ರವಾಣಿ (ಪ್ರಧಾನ ಸಂಪಾದಕತ್ವದ ಕವನ ಸಂಕಲನ), ಕಾಡುವ ಕಥೆಗಳು (ಅನುವಾದಿತ ಕಥಾ ಸಂಕಲನ, ತೆಲುಗು ಮೂಲ : ಸಲೀಂ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರು), ತಣ್ಣೀರ ...
READ MORE