ಬದುಕಬಾರದೆ ಬದುಕು...?-ಕವಿ ಜಾನ್ ಕೀಟ್ಸ್ ಅವರ ಪ್ರೇಮ ಪತ್ರಗಳು, ಕಾವ್ಯ ಹಾಗೂ ಬದುಕು ಕುರಿತು ಲೇಖಕ ರಾಜಶೇಖರ ಮಠಪತಿ (ರಾಗಂ) ಅವರು ರಚಿಸಿದ ಕೃತಿ. ಕವಿ ಜಾನ್ ಕೀಟ್ಸ್-ಇಂಗ್ಲಿಷ್ ಸಾಹಿತ್ಯದಲ್ಲಿ ವಿಶೇಷವಾಗಿ ಕಾವ್ಯ ಕ್ಷೇತ್ರದಲ್ಲಿ ಬಹು ದೊಡ್ಡ ಹೆಸರು. ತುಂಬಾ ಚಿಕ್ಕವಯಸ್ಸಿನಲ್ಲಿ ತೀರಿಕೊಂಡನಾದರೂ ಅದ್ಭುತವಾದ ಕವಿತೆಗಳನ್ನು ನೀಡಿದ್ದು, ಆತ ತನ್ನ ಪ್ರಿಯತಮೆಗೆ ಬರೆದ ಪ್ರೇಮಪತ್ರಗಳ ಅವಲೋಕನ, ಕವನಗಳು ಹಾಗೂ ಒಟ್ಟಾರೆ ಬದುಕನ್ನು ಕುರಿತು ವಿವರಿಸಿ, ವಿಶ್ಲೇಷಣೆಗೆ ಒಳಪಡಿಸಿದ ಕೃತಿ.
ಸಾಹಿತಿ, ಚಿಂತಕ, ಕನ್ನಡ ಸಾಹಿತ್ಯ ಆಕಾಡೆಮಿ ಸದಸ್ಯರಾದ ರಾಜಶೇಖರ ಮಠಪತಿ (ರಾಗಂ) ಅವರು ಹುಟ್ಟಿದ್ದು ಬೆಳಗಾಂವ ಜಿಲ್ಲೆಯ ತೆಲಸಂಗದಲ್ಲಿ. ಕರ್ನಾಟಕದ ಗಡಿಯ ಊರಾದ ಚಡಚಣದಲ್ಲಿ ಪ್ರಾಥಮಿಕದಿಂದ ಪದವಿಪೂರ್ವದ ಶಿಕ್ಷಣ, ನಂತರ ಬಿಜಾಪೂರ ಮತ್ತು ಸೊಲ್ಲಾಪುಗಳಲ್ಲಿ ಪದವಿ ಹಾಗೂ ಸ್ನಾತಕೋತ್ತರ ಶಿಕ್ಷಣ, ಕ.ವಿ.ವಿ ಧಾರವಾಡದಿಂದ ಆಂಗ್ಲ ಸಾಹಿತಿ, ಸಿನಿಮಾ ನಿರ್ದೇಶಕ,ಪತ್ರಕರ್ತ, ಕೆ.ಎ.ಅಬ್ಬಾಸರನ್ನು ಕುರಿತು ಪಿ.ಹೆಚ್.ಡಿ - ಹೀಗೆ ಶೈಕ್ಷಣಿಕ ಬದುಕಿನ ಹಲವು ಹಂತಗಳನ್ನು ಗಳಿಸಿದ್ದಾರೆ. ಇದುವರೆಗೆ ಅವರು ಕನ್ನಡ, ಇಂಗ್ಲಿಷ್ ಎರಡೂ ಭಾಷೆಗಳಲ್ಲಿ ಬರೆದ ಕೃತಿಗಳ ಸಂಖ್ಯೆ ಅರವತ್ತು ಅಂಕಿಯನ್ನು ದಾಟುತ್ತದೆ. ಕಾವ್ಯ, ಕತೆ, ನಾಟಕ, ಪ್ರಬಂಧ, ಅಂಕಣ, ಸಂಶೋಧನೆ, ...
READ MORE