ಖ್ಯಾತ ಲೇಖಕರಾದ ಎಸ್.ಎಸ್. ರಾಜಮೌಳಿ ಅವರ ಬಾಹುಬಲಿ-ಪ್ರಾರಂಭಕ್ಕೆ ಮುನ್ನ ಮತ್ತು ಆನಂದ್ ನೀಲಕಂಠನ್ ಅವರ ಶಿವಗಾಮಿ ಕಥೆ ಸಂಪುಟ-1- ಈ ಎರಡೂ ಕಾದಂಬರಿಗಳನ್ನು ಲೇಖಕಿ ಪ್ರತಿಭಾ ನಂದಕುಮಾರ ಅವರು ಇಂಗ್ಲಿಷಿನಿಂದ ಕನ್ನಡಕ್ಕೆ ಅನುವಾದಿಸಿದ್ದಾರೆ. ಉತ್ತಮ ಕಲ್ಪನಾ ಸಾಮರ್ಥ್ಯದ ದ್ಯೋತಕದಂತಿರುವ ಈ ಕಾದಂಬರಿಗಳನ್ನು ಮೂಲ ಭಾವಕ್ಕೆ ಧಕ್ಕೆಯಾಗದಂತೆ ಕನ್ನಡೀಕರಿಸಿದ್ದು, ಕನ್ನಡ ಸಾಹಿತ್ಯದಲ್ಲಿ ಉತ್ತಮ ಸೇರ್ಪಡೆಯಾಗಿದೆ.
ಲೇಖಕಿ ಪ್ರತಿಭಾ ನಂದಕುಮಾರ್ ಅವರು ಮೂಲತಃ ಬೆಂಗಳೂರಿನವರು. 1955 ಡಿಸೆಂಬರ್ 25ರಂದು ಜನಿಸಿದರು. ತಂದೆ-ವಿ. ಎಸ್. ರಾಮಚಂದ್ರರಾವ್, ತಾಯಿ- ಯಮುನಾಬಾಯಿ. ಬಾಲ್ಯದ ಬಹುದಿನಗಳನ್ನು ಬೆಂಗಳೂರು ಮತ್ತು ಮೈಸೂರಿನಲ್ಲಿ ಕಳೆದಿರುವ ಪ್ರತಿಭಾ, ಮದ್ರಾಸ್ ವಿಶ್ವವಿದ್ಯಾಲಯದಿಂದ ಎಂ.ಎ ಮತ್ತು ಎಂ.ಫಿಲ್ ಪದವಿ ಪಡೆದಿದ್ದಾರೆ. ಎನ್.ಜಿ.ಎಫ್‌ನಲ್ಲಿ ಭಾಷಾಂತರಕಾರರಾಗಿ ನಂತರ ಇಂಡಿಯನ್ ಎಕ್ಸ್‌ಪ್ರೆಸ್, ಡೆಕ್ಕನ್ ಹೆರಾಲ್ಡ್ ಮತ್ತು ಅಗ್ನಿ ಪತ್ರಿಕೆಗಳಲ್ಲಿ ಪತ್ರಕರ್ತೆಯಾಗಿ ಕಾರ್ಯನಿರ್ವಹಿಸಿದ್ದಾರೆ. ಜೊತೆಗೆ ಸಿನಿಮಾ ರಂಗದಲ್ಲಿಯೂ ಸಹಾಯಕ ನಿರ್ದೇಶಕಿಯಾಗಿ ಕಾರ್ಯ ನಿರ್ವಹಿಸಿದ್ದಾರೆ. ಪತಿ ನಂದಕುಮಾರ್ ಹಾಗೂ ಮಕ್ಕಳು ಅಭಿರಾಮ್ ಮತ್ತು ಭಾಮಿನಿ ಜೊತೆ ಸದ್ಯ ಬೆಂಗಳೂರಿನಲ್ಲಿ ವಾಸವಿರುವ ಪ್ರತಿಭಾ ನಂದಕುಮಾರ್ ಕಾವ್ಯಧರ್ಮವನ್ನೇ ...
READ MORE