ಬಹುಮಾನ ಪಡೆದ ಪುಸ್ತಕಗಳು ಎಂಬ ಪುಸ್ತಕವು ಜಿ.ಬಿ ಜೋಷಿ ಅವರ ಸಂಪಾದಿತವಾಗಿದೆ. ಕಾದಂಬರಿ,ನಾಟಕ, ಸಣ್ಣಕತೆ, ಏಕಾಂಕ, ವ್ಯಕ್ತಿ ಚಿತ್ರ, ಈ ಎಲ್ಲ ಲೇಖನಗಳನ್ನು ಹಾಗೂ ಶತಗ್ರಂಥೋತ್ಸವ ಸ್ಪರ್ಧೆಯಲ್ಲಿ ಬಹುಮಾನ ಪಡೆದ ಕೆಲ ಬರಹಗಳ ಸಂಕಲನವನ್ನು ಈ ಪುಸ್ತಕದಲ್ಲಿ ಹೊರತರಲಾಗಿದೆ.
ಪದ್ಮಶ್ರೀ ಗೋವಿಂದ ಭೀಮಾಚಾರ್ಯ ಜೋಶಿ ಇವರು 1904 ಜುಲೈ 26 ರಂದು ಗದಗ ಜಿಲ್ಲೆಯ ಹೊಂಬಳದಲ್ಲಿ ಜನಿಸಿದರು. ಜಿ.ಬಿ.ಜೋಶಿಯವರು 1933 ರಲ್ಲಿ ಮನೋಹರ ಗ್ರಂಥಮಾಲೆಯನ್ನು ಬೆಟಗೇರಿ ಕೃಷ್ಣಶರ್ಮ ಹಾಗೂ ಚುಳಕಿ ಗೋವಿಂದರಾವ ಇವರ ಜೊತೆಗೂಡಿ ಪ್ರಾರಂಭಿಸಿದರು. ಈ ಪ್ರಕಾಶನ ಸಂಸ್ಥೆಯ ಮೂಲಕ ಅನೇಕ ಖ್ಯಾತ ಲೇಖಕರನ್ನುಕನ್ನಡ ಸಾಹಿತ್ಯಕ್ಕೆ ಪ್ರಥಮವಾಗಿ ಪರಿಚಯಿಸಿದರು. 1959 ರಲ್ಲಿ ಹೊರಬಂದ ರಜತ ವರ್ಷದ ಕಾಣಿಕೆಯಾದ “ನಡೆದು ಬಂದ ದಾರಿ” ಮೂರು ಸಂಪುಟಗಳಲ್ಲಿ ಪ್ರಕಟವಾಯಿತು. ಈ ಹೊತ್ತಿಗೆಯಲ್ಲಿ ಪ್ರಕಟವಾದ ಕೀರ್ತಿನಾಥ ಕುರ್ತಕೋಟಿಯವರ ಕನ್ನಡ ಸಾಹಿತ್ಯದ ಸಮಗ್ರ ವಿಮರ್ಶೆ, ವಿಮರ್ಶಾಲೋಕದಲ್ಲಿ ಹೊಸ ಆಯಾಮವನ್ನು ತೆರೆಯಿತು. ಆ ಬಳಿಕ ವಿಮರ್ಶೆಯ ನಿಯತಕಾಲಿಕೆ “ಮನ್ವಂತರ”ವನ್ನು ಪ್ರಾರಂಭಿಸಿದರು. ಜಿ.ಬಿ.ಜೋಶಿಯವರು ...
READ MORE