ಡಾ/. ಜಯಪ್ರಕಾಶ ಮಾವಿನಕುಳಿ ಅವರು ಸಂಪಾದಿಸಿದ ಕೃತಿ-ಬಹುಮುಖಿ; ಎಸ್. ಮಾಲತಿ ನೆನಪಿನ ಪುಸ್ತಕ. ಲೇಖಕಿ ಎಸ್. ಮಾಲತಿ ಅವರು ಕಾದಂಬರಿ ಕ್ಷೇತ್ರದಲ್ಲಿ ಹೆಸರಾಂತ ಬರಹಗಾರ್ತಿ. ಪ್ರಸ್ತುತ ಸಾಮಾಜಿಕ ಸಮಸ್ಯೆಗಳಿಗೆ ತಮ್ಮ ಸಾಹಿತ್ಯದ ಮೂಲಕ ಸ್ಪಂದಿಸಿದವರು. ಸಾಮಾಜಿಕ ಸಮಸ್ಯೆ, ಪಿಡುಗುಗಳ ನಿವಾರಣೆಗೆ ತಮ್ಮ ಸಾಹಿತ್ಯದಲ್ಲಿ ಪರಿಹಾರ ತೋರಲು ಯತ್ನಿಸಿದವರು. ಹೊಸ ಕಾಣ್ಕೆಗಳನ್ನು ಪಾತ್ರಗಳ ಮೂಲಕ ಸೂಚಿಸಿದವರು. ಅವರ ಬಹುಮುಖಿ ವ್ಯಕ್ತಿತ್ವವನ್ನು ನಾಡಿನ ವಿವಿಧ ಲೇಖಕರಿಂದ ಬರಹಗಳನ್ನು ತರಿಸಿಕೊಂಡು ಸಂಪಾದಿಸಿರುವುದು ಈ ಕೃತಿಯ ಹೆಚ್ಚುಗಾರಿಕೆ.
ಸಾಹಿತಿ ಜಯಪ್ರಕಾಶ ಮಾವಿನಕುಳಿ ಅವರು ಉಡುಪಿಯ ಎಂ.ಜಿ.ಎಂ. ಕಾಲೇಜಿನಲ್ಲಿ ಪ್ರಾಚಾರ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಸಾಹಿತ್ಯಿಕ ಕೃಷಿಯ ಜೊತೆಗೆ ನಾಟಕಕಾರರಾಗಿ, ರಂಗ ನಿರ್ದೇಶಕರಾಗಿ ಮತ್ತು ರಂಗಭೂಮಿ ಚಲನಚಿತ್ರ ನಟರಾಗಿಯೂ ಖ್ಯಾತಿ ಗಳಿಸಿದ್ದಾರೆ. ಕನ್ನಡ ಸಾಹಿತ್ಯಲೋಕಕ್ಕೆ ಹಲವು ನಾಟಕಗಳು, ಕಾದಂಬರಿ, ಸಣ್ಣಕತೆಗಳು, ಕಾವ್ಯ ಮತ್ತು ಇತರರೊಡನೆ ಹಲವು ಕೃತಿಗಳ ಸಂಪಾದನೆ ಸೇರಿದಂತೆ ಸುಮಾರು ಎಪ್ಪತ್ತು ಪುಸ್ತಕಗಳನ್ನು ನೀಡಿದ್ದಾರೆ. 1978ರಿಂದಲೂ ಸಾಹಿತ್ಯ ಕೃಷಿಯಲ್ಲಿ ತೊಡಗಿದ್ದು 4 ಕಥಾ ಸಂಕಲನಗಳು, 4 ಕವನ ಸಂಕಲನಗಳು, 7 ನಾಟಕಗಳು, 12 ಸಂಪಾದಿತ ಕೃತಿಗಳು ಹಾಗೂ ಇತರ ಕೃತಿಗಳೊಂದಿಗೆ 60ಕ್ಕೂ ಅಧಿಕ ಕೃತಿಗಳನ್ನು ರಚಿಸಿದ್ದಾರೆ. 'ಪೊಲಿಟಿಕ್ಸ್ ಆ್ಯಂಡ್ ಕಲ್ಚರ್' ಪ್ರೌಢ ಪ್ರಬಂಧಕ್ಕೆ ಡಾಕ್ಟರೇಟ್ ಪಡೆದಿದ್ದಾರೆ. ...
READ MORE