ಹಿರಿಯ ಸಾಹಿತಿ ಡಾ. ಗೊರೂರು ರಾಮಸ್ವಾಮಿ ಅಯ್ಯಂಗಾರ್ ಅವರ ಕಾದಂಬರಿ-ಬೈಲಹಳ್ಳಿ ಸರ್ವೆ. ಹಳ್ಳಿಯೊಂದರ ಸರ್ವೆ ಪ್ರಕ್ರಿಯೆಯಲ್ಲಿ ಎದುರಾಗುವ ತೊಂದರೆ, ಹಾಸ್ಯಮಯ ಪ್ರಸಂಗ, ಜನರ ವಿಚಾರಗಳು, ಸರ್ಕಾರದ ಯೋಜನೆಗಳು ಇತ್ಯಾದಿ ಕುರಿತು ವಿವಿಧ ಸನ್ನಿವೇಶಗಳಿಂದ ಹೆಣೆದ ಕಾದಂಬರಿ ಇದು. ನಿರೂಪಣಾ ಶೈಲಿ, ಪಾತ್ರಗಳ ಸೃಷ್ಟಿ, ಪರಿಣಾಮಕಾರಿ ಸಂಭಾಷಣೆ ಇತ್ಯಾದಿ ಸಾಹಿತ್ಯಕ ಅಂಶಗಳಿಂದ ಈ ಕಾದಂಬರಿಯು ಓದುಗರ ಗಮನ ಸೆಳೆಯುತ್ತದೆ. ,
ಗಾಂಧಿವಾದಿ ಮತ್ತು ಸ್ವಾತಂತ್ರ್ಯ ಹೋರಾಟಗಾರರಾದ ಗೊರೂರು ರಾಮಸ್ವಾಮಿ ಅಯ್ಯಂಗಾರ್ ಅವರು ಕನ್ನಡದ ಜನಪ್ರಿಯ ಸಾಹಿತಿಗಳಲ್ಲಿ ಒಬ್ಬರಾಗಿದ್ದರು. ಗೊರೂರು ಗ್ರಾಮದಲ್ಲಿ 1904ರ ಜುಲೈ 4ರಂದು ಜನಿಸಿದರು. ತಂದೆ ಶ್ರೀನಿವಾಸ ಅಯ್ಯಂಗಾರ್ ತಾಯಿ ಲಕ್ಷ್ಮಮ್ಮ. ಗೊರೂರಿನಲ್ಲಿ ಪ್ರಾಥಮಿಕ ಶಾಲಾ ಶಿಕ್ಷಣವನ್ನು ಮುಗಿಸಿದ ಮೇಲೆ ಹಾಸನದಲ್ಲಿ ಪ್ರೌಢಶಾಲಾ ಶಿಕ್ಷಣ ಪಡೆಯುತ್ತಿದ್ದಾಗಲೇ ಸ್ವಾತಂತ್ರ್ಯ ಚಳುವಳಿಯಲ್ಲಿ ಭಾಗವಹಿಸಿದರು. ಅನಂತರ ಗುಜರಾತ್ ಗಾಂಧಿ ಆಶ್ರಮದಲ್ಲಿದ್ದ ವಿದ್ಯಾ ಪೀಠದಲ್ಲಿ ಓದು ಮುಂದುವರೆಸಿದರು. ಅನಂತರ ಪತ್ರಿಕಾರಂಗ ಪ್ರವೇಶಿಸಿದರು. ಮದರಾಸಿನ `ಲೋಕಮಿತ್ರ’ ಆಂಧ್ರ ಪತ್ರಿಕೆ `ಭಾರತಿ’ ಪತ್ರಿಕೆಗಳಲ್ಲಿ ಉಪಸಂಪಾದಕರಾಗಿ, ಸಂಪಾದಕರಾಗಿ ಸೇವೆ ಸಲ್ಲಿಸಿದರು. 1952ರಲ್ಲಿ ವಿಧಾನಸಭೆಗೆ ನಾಮಕರಣಗೊಂಡಿದ್ದ ಅವರು ಅದಕ್ಕೂ ...
READ MORE