ಪುರಾಣ, ಇತಿಹಾಸ ಮತ್ತು ಸಮಕಾಲೀನ ಸ್ತ್ರೀ ಯರ ಬಗೆಗಿನ ಒಳನೋಟಗಳನ್ನು ವಾಸ್ತವದ ನೆಲೆಯಲ್ಲಿ ಕಟ್ಟಿಕೊಡಲಾಗಿದೆ. ಇಲ್ಲಿ ಪಿಸುಮಾತುಗಳಿವೆ, ಆದರೆ ನಾಳೆ ಇವು ಕೆಂಡದ ಮಳೆಗರೆಯಬಲ್ಲವು ಎಂದು ವಿಮರ್ಶಕರು ಗುರುತಿಸಿದ್ದಾರೆ. ಈ ಕೃತಿಯು 2019 ನೇ ಸಾಲಿನ ಅಮ್ಮ ಪ್ರಶಸ್ತಿ ಪಡೆದಿದೆ. ಪ್ರಜಾವಾಣಿಯ ವರ್ಷದ ಉತ್ತಮ ಓದು ಪ್ರಕಟಣೆಯಲ್ಲಿ ಸ್ಥಾನ ಪಡೆದಿದೆ.
ಸುಧಾ ಆಡುಕಳ ಅವರು ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಆಡುಕಳ ಗ್ರಾಮದವರಾದ ಶ್ರೀಮತಿ ಸುಧಾ ಆಡುಕಳ ಅವರು ಪ್ರಸ್ತುತ ಉಡುಪಿಯ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಗಣಿತ ಉಪನ್ಯಾಸಕರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ರಾಧಾ, ನೃತ್ಯಗಾಥಾ, ಆನಂದಭಾವಿನಿ, ಮಾಧವಿ ಮೊದಲಾದ ಏಕವ್ಯಕ್ತಿ ನಾಟಕಗಳನ್ನು, ಮಕ್ಕಳ ರವೀಂದ್ರ, ಕನಕ-ಕೃಷ್ಣ, ಮಕ್ಕಳ ರಾಮಾಯಣ, ಬ್ರಹ್ಮರಾಕ್ಷಸ ಮತ್ತು ಕಥೆ, ಮರ ಮತ್ತು ಮನುಷ್ಯ ಮೊದಲಾದ ಮಕ್ಕಳ ನಾಟಕಗಳನ್ನು ರಚಿಸಿರುತ್ತಾರೆ. ರವೀಂದ್ರನಾಥ ಟ್ಯಾಗೋರರ ಕೆಂಪು ಕಣಗಿಲೆ, ಚಿತ್ರಾ ಮತ್ತು ಅವಳ ಕಾಗದ ನಾಟಕಗಳನ್ನು ಕನ್ನಡಕ್ಕೆ ರೂಪಾಂತರಿಸಿದ್ದಾರೆ. ಇವರ ‘ಬಕುಲದ ಬಾಗಿಲಿನಿಂದ’ ಕೃತಿಗೆ ರಾಜ್ಯಸಾಹಿತ್ಯ ಅಕಾಡೆಮಿ ಬಹುಮಾನ ...
READ MOREಕರ್ನಾಟಕ ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ 2019