ಬಂಡಾಯದ ಹಾಡು-ಡಾ. ಬರಗೂರು ರಾಮಚಂದ್ರಪ್ಪ ಅವರ ಕವನ ಸಂಕಲನ. ಬಂಡಾಯ ಸಾಹಿತ್ಯ ಸಂಘಟನೆ, ಚಳವಳಿ ಮೂಲಕ ಸಾಂಪ್ರದಾಯಿಕ ಮೌಢ್ಯಗಳನ್ನು ತಿರಸ್ಕರಿಸುತ್ತಾ ಬಂದ ಇತರೆ ಚಿಂತಕರ ಪೈಕಿ ಬರಗೂರು ರಾಮಚಂದ್ರಪ್ಪ ಸಹ ಪ್ರಮುಖರು. ಬಂಡಾಯ ಒಂದು ಮನೋಧರ್ಮವೇ ಹೊರತು ವ್ಯಕ್ತಿಗತವಾಗಿ ಯಾರ ವಿರುದ್ಧವೂ ಹೋರಾಟ ನಡೆಸುತ್ತಿಲ್ಲ ಎಂಬ ಸ್ಪಷ್ಟ ಸಂದೇಶದ ಮೂಲಕ ಹೆಣೆದ ಕವಿತೆಗಳು ಇಲ್ಲಿ ಸಂಕಲನಗೊಂಡಿವೆ. ಬಹುತೇಕ ಕವಿತೆಗಳು ವ್ಯವಸ್ಥೆಯ ಸಾಂಪ್ರದಾಯಿಕತೆಯನ್ನು ಪ್ರಶ್ನಿಸಿ, ವಿರೋಧಿಸುತ್ತವೆ. ಇವುಗಳ ಕಾವ್ಯಾಂಶವು ಮಾನವೀಯತೆಯೇ ಆಗಿದೆ. ಹೊಸದೊಂದು ಸಾಮಾಜಿಕ ವ್ಯವಸ್ಥೆ, ಚಿಂತನಾ ಕ್ರಮವನ್ನು ಇವು ಪ್ರತಿಪಾದಿಸುತ್ತವೆ.
ಬಂಡಾಯ ಸಾಹಿತ್ಯ ಚಳವಳಿಯ ಪ್ರಮುಖ ಲೇಖಕ ಬರಗೂರು ರಾಮಚಂದ್ರಪ್ಪ ಅವರು ಕತೆ-ಕಾದಂಬರಿ-ಕಾವ್ಯಗಳಂತಹ ಸೃಜನಶೀಲ ಕೃತಿಗಳ ಜೊತೆಗೆ ಚಿಂತನ ಪರ ಬರಹ, ವಿಮರ್ಶೆಗಳ ಮೂಲಕ ಹೆಸರಾದವರು. ರಾಮಚಂದ್ರಪ್ಪ ಅವರು 1946ರ ವರ್ಷದ ಅಕ್ಟೋಬರ್ 18ರಂದು ತುಮಕೂರು ಜಿಲ್ಲೆಯ ಬರಗೂರು ಗ್ರಾಮದಲ್ಲಿ ಜನಿಸಿದರು. ಇವರ ತಾಯಿ ಕೆಂಚಮ್ಮ, ತಂದೆ ರಂಗದಾಸಪ್ಪ. ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಕೇಂದ್ರದ ಪ್ರಾಧ್ಯಾಪಕ, ನಿರ್ದೇಶಕ ಆಗಿದ್ದರು. ಸಾಹಿತ್ಯದಷ್ಟೇ ಸಿನಿಮಾವನ್ನು ಗಾಢವಾಗಿ ಪ್ರೀತಿಸುವ ಅವರು ಸಿನಿಮಾದ ಕಮರ್ಷಿಯಲ್ ಸೂತ್ರಗಳಿಗೆ ಜೋತು ಬೀಳದೆ ಅಲ್ಲೂ ವಿಭಿನ್ನ ಹಾದಿ ಹಿಡಿದವರು. ಆಡಳಿಗಾರರಾಗಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷತೆ, ಕನ್ನಡ ...
READ MORE