‘ಬಂಗಾರಿ’ ತ.ರಾ.ಸು ಅವರ ಕಾದಂಬರಿ. ಮನುಷ್ಯರು ಒಬ್ಬರನ್ನೊಬ್ಬರು ಕಲೆತಾಗ, ತಮ್ಮ ತಮ್ಮ ವಿಷಯ ಮಾತನಾಡಿಕೊಳ್ಳುವಂತೆಯೂ, ಅಕಾರಣವಾಗಿಯೋ, ಸಕಾರಣವಾಗಿಯೊ ಮತ್ತೊಬ್ಬರ ವಿಷಯವನ್ನು ಮಾತನಾಡುತ್ತಾರೆ. ಹಾಗೆ ಮಾತನಾಡುವಾಗ, ಇದುರಿಗಿಲ್ಲದ ಮೂರನೆಯ ವ್ಯಕ್ತಿಯನ್ನು ಕುರಿತು 'ಆತ ಒಳ್ಳೆಯವನು', 'ಈತ ಕೆಟ್ಟವನು' ಎಂಬ ಅಭಿಪ್ರಾಯವನ್ನು ವ್ಯಕ್ತಮಾಡುತ್ತಾರೆ. ಈ ಮಾತುಗಳಿಗೆ, ಒಬ್ಬ ವ್ಯಕ್ತಿಯ ಎಷ್ಟೋ ವರ್ಷದ ಜೀವನದ ಬಗ್ಗೆ ತೀರ್ಮಾನ ಕೊಡುವ ಶಕ್ತಿ ಇದೆ. ಇಂತಹ ಸೂಕ್ಷ್ಮ ವಿಚಾರಗಳನ್ನೇ ಕಥಾವಸ್ತುವಾಗಿಸಿಕೊಂಡಿರುವ ಈ ಕಾದಂಬರಿ ಓದುಗರನ್ನು ಚಿಂತನೆಗೆ ಹಚ್ಚುತ್ತದೆ.
ತಳುಕು ರಾಮಸ್ವಾಮಯ್ಯ ಸುಬ್ಬರಾಯ(ತ.ರಾ.ಸು) ಹುಟ್ಟಿದ್ದು 1906 ಜೂನ್ 12 ಚಿತ್ರದುರ್ಗ ಜಿಲ್ಲೆಯ ಚೆಳ್ಳೆಕೆರೆ ತಾಲ್ಲೂಕಿನ ತಳುಕು ಎಂಬ ಗ್ರಾಮದಲ್ಲಿ. ಮೂಲ ಆಂಧ್ರಪ್ರದೇಶದವರು. ತಂದೆ ರಾಮಸ್ವಾಮಯ್ಯ ಅವರು ತಳುಕು ಗ್ರಾಮಕ್ಕೆ ಬಂದು ನಂತರ ಚಿತ್ರದುರ್ಗದಲ್ಲಿ ಪ್ಲೀಡರ್ ಆಗಿದ್ದರು. ಸುಬ್ಬಾರಾಯರು ಇಂಟರ್ ಮೀಡಿಯೆಟ್ನಲ್ಲಿದ್ದಾಗ ದೇಶದ ಸ್ವಾತಂತ್ಯ್ರ ಚಳವಳಿಯಲ್ಲಿ ಧುಮುಕಿದರು. ಪ್ರಮುಖ ಕೃತಿಗಳು: ಕಂಬನಿಯ ಕುಯಿಲು, ರಕ್ತರಾತ್ರಿ, ದುರ್ಗಾಸ್ತಮಾನ, ನೃಪತುಂಗ, ಸಿಡಿಲ ಮೊಗ್ಗು, ಶಿಲ್ಪಶ್ರೀ, ಕಸ್ತೂರಿ ಕಂಕಣ, ತಿರುಗುಬಾಣ-, ಈ ಕಾದಂಬರಿಗಳು ಬರೆಹಾ ಕೌಶಲ್ಯಕ್ಕೆ ಹಿಡಿದ ಕನ್ನಡಿ. ಚಲನಚಿತ್ರವಾದ ಕಾದಂಬರಿಗಳು: ಚಂದವಳ್ಳಿಯ ತೋಟ, ಹಂಸಗೀತೆ (1956ರಲ್ಲಿ ಬಸಂತ ಬಹಾರ್ ಹೆಸರಲ್ಲಿ ಹಿಂದಿ ಚಲನಚಿತ್ರವಾಗಿತ್ತು.) ನಾಗರಹಾವು, ...
READ MORE