‘ಬಣ್ಣದ ಬದುಕಿನ ಚಿನ್ನದ ದಿನಗಳು’ ಪ್ರಸಿದ್ಧ ರಂಗಕರ್ಮಿ, ಕಲಾವಿದರಾದ ಏಣಗಿ ಬಾಳಪ್ಪನವರ ರಂಗಾನುಭವ ಕಥನ. ಲೇಖಕ ಗಣೇಶ ಅಮೀನಗಡ ಅವರು ಏಣಗಿ ಬಾಳಪ್ಪನವರ ರಂಗಭೂಮಿಯ ಅನುಭವಗಳನ್ನು ಈ ಕೃತಿಯ ಮೂಲಕ ದಾಖಲೀಕರಿಸಿದ್ದಾರೆ. ರಂಗಭೂಮಿಯ ನಂಟಿನೊಡನೆ ಬಾಳಪ್ಪನವರ ಬದುಕಿನ ಕುರಿತೂ ಮಾಹಿತಿಗಳಿವೆ.
ಊರು ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲ್ಲೂಕಿನ ಅಮೀನಗಡ, ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಕನ್ನಡ ಎಂ.ಎ., ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ 'ಕನ್ನಡ ಬಂಡಾಯ ಕಾವ್ಯದಲ್ಲಿ ಪ್ರತಿಮಾ ಸಂವಿಧಾನ ಕುರಿತು ಪಿಎಚ್.ಡಿ. ಮೂರು ವರ್ಷ ಸಂಯುಕ್ತ ಕರ್ನಾಟಕದಲ್ಲಿ ಪತ್ರಕರ್ತರಾಗಿ ಸೇವೆ, ಈಗ ಮೈಸೂರಲ್ಲಿ ಪ್ರಜಾವಾಣಿಯ ಮುಖ್ಯ ವರದಿಗಾರ. ರಂಗಭೂಮಿ ಕುರಿತ ಲೇಖನಗಳ ಸಂಕಲನ 'ಪ್ರಯೋಗ ಪ್ರಸಂಗ' ಕೃತಿ (2004), ವಿಜಾಪುರದ ಯುವ ಲೇಖಕರ ವೇದಿಕೆಯ ಪ್ರಶಸ್ತಿ, ಸೇಡಂನ ಅಮ್ಮ ಪ್ರಶಸ್ತಿ ಹಾಗೂ ಕರ್ನಾಟಕ ನಾಟಕ ಅಕಾಡೆಮಿಯ ಪ್ರಶಸ್ತಿಗಳಿಂದ ಪುರಸ್ಕೃತಗೊಂಡಿದೆ. ಏಣಗಿ ಬಾಳಪ್ಪ ಅವರ ರಂಗಾನುಭವ ಕಥನ 'ಬಣ್ಣದ ಬದುಕಿನ ಚಿನ್ನದ ದಿನಗಳು' ...
READ MORE