ಪ್ರೊ. ಎಲ್.ಎಸ್. ಶೇಷಗಿರಿರಾವ್ ಅವರ ಕೃತಿ-ಬಾನುಲಿಯ ಬರಹಗಳು, ಸಾಹಿತ್ಯಕ ಚಿಂತನೆಗಳು. ಲೇಖಕರು ಸಾಹಿತ್ಯಕವಾಗಿ ಬರೆದ ಚಿಂತನಾ ಪ್ರಬಂಧ-ಲೇಖನಗಳನ್ನು ಬಾನುಲಿಯಲ್ಲಿ ಪ್ರಸಾರಗೊಂಡಿದ್ದು, ಅವುಗಳ ಸಂಗ್ರಹ ಕೃತಿ ಇದು. ಬಾನುಲಿ ಪ್ರಸಾರಕ್ಕಾಗಿ ಬರೆಯುವ ಯಾವುದೇ ಬರಹದ ಸ್ವರೂಪ ಹೇಗಿರಬೇಕು, ವಿಷಯ ಮಂಡನಾ ವಿಧಾನ ಹೇಗಿರಬೇಕು ಎಂಬಿತ್ಯಾದಿ ಅಂಶಗಳ ಅಧ್ಯಯನಕ್ಕೂ ಇಲ್ಲಿಯ ಬರಹಗಳು ಮಹತ್ವದ ಸುಳಿವು ನೀಡುತ್ತವೆ.
ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದ ಎಲ್.ಎಸ್. ಶೇಷಗಿರಿರಾವ್ ಅವರು ಪ್ರಬುದ್ಧ ವಿಮರ್ಶಕರೆಂದೇ ಖ್ಯಾತರು. ತಂದೆ ಸ್ವಾಮಿರಾವ್- ತಾಯಿ ಕಮಲಾಬಾಯಿ. 1925ರ ಫೆಬ್ರುವರಿ 16ರಂದು ಜನಿಸಿದರು. ಬೆಂಗಳೂರು ಮೈಸೂರುಗಳಲ್ಲಿ ವಿದ್ಯಾಭ್ಯಾಸ ಮಾಡಿದ ಇವರು ನಾಗಪುರ ವಿ.ವಿ.ಯಲ್ಲಿ ಇಂಗ್ಲಿಷ್ ಎಂ.ಎ. ಪದವೀಧರರಾದರು. ಕಾಲೇಜು ಶಿಕ್ಷಣ ಇಲಾಖೆಗೆ ಸೇರಿ ಕೋಲಾರ, ಮಡಿಕೇರಿ, ಬೆಂಗಳೂರುಗಳಲ್ಲಿ ಕಾಲೇಜು ಅಧ್ಯಾಪಕರಾಗಿ ಕೊನೆಯಲ್ಲಿ ಕೆಲವುಕಾಲ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದರು. 1947-50ರಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾಗಿ ಬಿ.ಎಂ.ಶ್ರೀ ಸ್ಮಾರಕ ಪ್ರತಿಷ್ಠಾನದ ಅಧ್ಯಕ್ಷರಾಗಿ ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಥಮ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ಕೇಂದ್ರ ಸಾಹಿತ್ಯ ಅಕಾಡೆಮಿ ...
READ MORE