ಕಮಲಾ ಹಂಪನಾ ಅವರ ಸಮಗ್ರ ಸಾಹಿತ್ಯ ಸಂಪುಟಗಳಲ್ಲಿ ಇದು ಹತ್ತನೇ ಸಂಪುಟ. ಈ ಸಂಪುಟದಲ್ಲಿ ವಿಮರ್ಶೆ, ವೈಚಾರಿಕ ಸಾಹಿತ್ಯ, ಮಹಿಳಾ ಸಂವೇದನೆ, ವ್ಯಕ್ತಿ ಚಿತ್ರಗಳು, ಜೀವನ ಚರಿತ್ರೆಗಳು- ಹೀಗೆ ಸುಮಾರು 15 ಸಾಹಿತ್ಯ ಪ್ರಕಾರಗಳ ಕುರಿತು ಮಾಹಿತಿ ಇದೆ.
ಲೇಖಕಿಯಾಗಿ ಚಿರಪರಿಚಿತರಾಗಿರುವ ಕಮಲಾ ಹಂಪನಾ ಅವರು ಪ್ರಾಕೃತ, ಜೈನಶಾಸ್ತ್ರದಲ್ಲಿ ಪರಿಣಿತರು. ಬೆಂಗಳೂರು ಜಿಲ್ಲೆ ದೇವನಹಳ್ಳಿಯಲ್ಲಿ 1935ರ ಅಕ್ಟೋಬರ್ 28 ರಂದು ಜನಿಸಿದರು. ತಂದೆ ಸಿ. ರಂಗಧಾಮನಾಯಕ್- ತಾಯಿ ಲಕ್ಷಮ್ಮ. ಚಳ್ಳಕೆರೆಯಲ್ಲಿ ಪ್ರಾರಂಭವಾದ ಪ್ರಾಥಮಿಕ ವಿದ್ಯಾಭ್ಯಾಸ ಬೇರೆ ಬೇರೆ ಊರುಗಳಲ್ಲಿ ಮುಂದುವರಿಯಿತು. ತುಮಕೂರಿನಲ್ಲಿ ಹೈಸ್ಕೂಲ್ ವಿದ್ಯಾಭ್ಯಾಸವಾಗಿ, ಕಾಲೇಜು ವಿದ್ಯಾಭ್ಯಾಸ ಮೈಸೂರಿನಲ್ಲಿ ಮುಂದುವರೆದು ಬಿ.ಎ. ಆನರ್ಸ್ (1958) ಮಾಡಿದರು. ಕನ್ನಡ ಅಧ್ಯಾಪಕಿಯಾಗಿ (1959) ಶಿಕ್ಷಣ ವೃತ್ತಿಗೆ ಪ್ರವೇಶಿಸಿ, ಬೆಂಗಳೂರು ಮತ್ತು ಮೈಸೂರು ಮಹಾರಾಣಿ ಕಾಲೇಜುಗಳಲ್ಲಿ ಪ್ರಾಧ್ಯಾಪಕರಾಗಿ ಬೆಂಗಳೂರಿನ ವಿಜಯನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸಿದರು. ಸರ್ಕಾರಿ ...
READ MORE