‘ಬಸವ ಪುರಾಣ’ ಲೇಖಕ ಪಿ.ವಿ. ನಾರಾಯಣ ಅವರ ಕೃತಿ. ಬಸವಣ್ಣನ ಕುರಿತಾಗಿ ಇರುವ ಪುರಾಣ ಕತೆಗಳು ಮತ್ತು ಅನುವಾದಗಳ ಕುರಿತಾದ ಅಧ್ಯಯನಾತ್ಮಕ ಕೃತಿ ಇದಾಗಿದೆ. ಬಸವಣ್ಣನ ಕತೆಗಳು ಜನಮಾಸನದಲ್ಲಿ ಬೆರೆತ ಕುರಿತಾದ ಮಹತ್ವದ ಮಾಹಿತಿಗಳನ್ನು ಈ ಕೃತಿಯಲ್ಲಿ ಕಾಣಬಹುದಾಗಿದೆ.
ಡಾ. ಪಿ. ವಿ. ನಾರಾಯಣ, ಬೆಂಗಳೂರಿನ ವಿಜಯಾ ಕಾಲೇಜಿನಲ್ಲಿ ಕನ್ನಡ ಪ್ರವಾಚಕರಾಗಿದ್ದರು. ತಂದೆ ಪಿ.ವೆಂಕಪ್ಪಯ್ಯ, ತಾಯಿ ನರಸಮ್ಮ. ಬೆಂಗಳೂರಿನಲ್ಲಿ 1942ರ ಡಿ.18 ರಂದು ಹುಟ್ಟಿದರು. ಮೈಸೂರು ವಿಶ್ವವಿದ್ಯಾಲಯದಿಂದ ಎಂ.ಎ. (ಕನ್ನಡ) ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎ. (ಇಂಗ್ಲಿಷ್), “ವಚನ ಸಾಹಿತ್ಯ: ಒಂದು ಸಾಂಸ್ಕೃತಿಕ ಅಧ್ಯಯನ” ಮಹಾಪ್ರಬಂಧಕ್ಕೆ ಬೆಂಗಳೂರು ವಿಶ್ವವಿದ್ಯಾಲಯದಿಂದ ಪಿಎಚ್.ಡಿ. ಪಡೆದಿದ್ದಾರೆ.. ವಿಮರ್ಶೆ/ಸಂಶೋಧನೆ-ಬಳ್ಳಿಗಾವೆ, ಕಾಯತತ್ತ್ವ, ಚಂಪೂಕವಿಗಳು, ವಚನ ಚಳವಳಿ, ವಚನ ವ್ಯಾಸಂಗ ಮೊದಲಾದ 16ಕೃತಿಗಳು. ಸಂಪಾದಿತ-ಬಸವ ಪುರಾಣ ಸಂಗ್ರಹ, ಪದ್ಮಿನೀ ಪರಿಣಯ ಮೊದಲಾದ 5 ಕೃತಿಗಳು. ಅನುವಾದ-ಮದುವೆ ಮತ್ತು ನೀತಿ, ಹನ್ನೆರಡನೇ ರಾತ್ರಿ, ಅಶ್ವತ್ಥಾಮನ್, ಬುವಿಯ ಬಸಿರಿಗೆ ಪಯಣ, ಪಂಪ ರಾಮಾಯಣ ಮುಂತಾದ 12 ಕೃತಿಗಳು. ಕಾದಂಬರಿಗಳು-ಸಾಮಾನ್ಯ, ...
READ MORE