ಡಾ. ಎಲ್. ಬಸವರಾಜು ಅವರು ಬಸವಣ್ಣನವರ ವಚನಗಳನ್ನು ಕುರಿತು ಬರೆದ ಕೃತಿ. 12ನೇ ಶತಮಾನದ ಬಹುತೇಕ ಶರಣರ ವಚನಗಳ ಅಧ್ಯಯನ ಮಾಡಿರುವ ಲೇಖಕರು ಹೆಚ್ಚುಕಡಿಮೆ ಬಹುತೇಕ ಶರಣರ ಜೀವನ ಸಂದೇಶಗಳ ಬಗ್ಗೆ ಬರೆದಿದ್ದು, ಎಂದೆಂದಿಗೂ ಶರಣರ ವಚನಗಳ ಪಾಲನೆಯೇ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಮೂಲವಾಗುತ್ತದೆ ಎಂದು ಪ್ರತಿಪಾದಿಸುತ್ತಲೇ ಬಂದವರು. ಈ ಕೃತಿಯಲ್ಲಿ ಬಸವಣ್ಣನವರ ವನಚಗಳನ್ನು ಸಂಗ್ರಹಿಸಿದ್ದು ಮಾತ್ರವಲ್ಲ; ಒಳನೋಟದ ವಿಶ್ಲೇಷಣೆಯೂ ಇದೆ.
ಕನ್ನಡದಲ್ಲಿ ಶ್ರೇಷ್ಠ ವಿದ್ವಾಂಸರಾಗಿ ಹಳಗನ್ನಡದಲ್ಲಿ ಪ್ರಭುತ್ವ ಪಡೆದಿದ್ದ ಎಲ್. ಬಸವರಾಜು ಅವರು ಕೋಲಾರದ ಇಡಗೂರಿನಲ್ಲಿ 1919ರ ಅಕ್ಟೋಬರ್ 7ರಂದು ಜನಿಸಿದರು. ತಂದೆ ಲಿಂಗಪ್ಪ- ತಾಯಿ ಈರಮ್ಮ. ಬಾಲ್ಯದಲ್ಲಿ ಬಡತನದ ಬವಣೆಯಿಂದ ಊರಿನ ಭೀಮೇಶ್ವರ ದೇಗುಲದಲ್ಲಿ ಅರ್ಚಕರಾಗಿದ್ದರು. ಸಿದ್ಧಗಂಗೆಯಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿ, ಕನ್ನಡ ಎಂ.ಎ. ಪದವಿಯನ್ನು ಮೈಸೂರು ವಿಶ್ವವಿದ್ಯಾನಿಲಯದಿಂದ ಪಡೆದರು. ದಾವಣಗೆರೆ ಡಿ.ಆರ್.ಎಂ. ಕಾಲೇಜಿನಲ್ಲಿ ಕನ್ನಡ ಅಧ್ಯಾಪಕರಾಗಿ, ಕೆಲಕಾಲಾನಂತರ ಮೈಸೂರು ವಿಶ್ವವಿದ್ಯಾನಿಲಯದ ಯುವರಾಜ ಕಾಲೇಜು, ಕನ್ನಡ ಅಧ್ಯಯನ ಸಂಸ್ಥೆಗಳಲ್ಲಿ ಅಧ್ಯಾಪಕರಾಗಿ ಅನಂತರ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದರು. ಇವರ ಸಾಹಿತ್ಯ ಕ್ಷೇತ್ರದ ಸಾಧನೆಗಾಗಿ ನಾಡಿನ ಅನೇಕ ಸಂಸ್ಥೆಗಳು ಇವರನ್ನು ...
READ MORE