ಡಾ. ಕೃಷ್ಣಾನಂದ ಕಾಮತ್ ಅವರು ಬರೆದ ಪ್ರವಾಸ ಕಥನ. ಮಧಪ್ರದೇಶದ ಹಿಂದುಳಿದ ಜಿಲ್ಲೆ ಬಸ್ತರ. ನಿಸರ್ಗ ಸಂಪತ್ತಿನಿಂದ ಕಂಗೊಳಿಸುವ ಪ್ರದೇಶ. ವರ್ಷದಲ್ಲಿ 160 ಸೆಂ.ಮೀ. ಮಳೆ ಬೀಳುವ ಪ್ರದೇಶ. ತುಂಬಿ ಹರಿಯುವ ನದಿಗಳು. ಹೊರಗಿನವರಿಗೆ ದುಸ್ತರವೆನಿಸುವಂಥ ಪ್ರದೇಶವಿದು. ಲೇಖಕರು ಈ ಪ್ರದೇಶದಲ್ಲಿ ಪ್ರವಾಸ ಕೈಗೊಂಡು ತಾವು ಕಂಡ ಅನುಭವಗಳನ್ನು ಇಲ್ಲಿ ಸಚಿತ್ರ ಸಮೇತವಾಗಿ ದಾಖಲಿಸಿದ್ದಾರೆ.
ಖ್ಯಾತ ಸಾಹಿತಿ ಹಾಗೂ ವಿಜ್ಞಾನಿಯಾದ ಕೃಷ್ಣಾನಂದ ಕಾಮತ್ ಅವರು 1934ರ ಸೆಟ್ಪಂಬರ್ 29 ರಂದು ಜನಿಸಿದರು. ಊರು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ. ತಂದೆ ಲಕ್ಷ್ಮಣ ವಾಸುದೇವ ಕಾಮತ್, ತಾಯಿ ರಮಾಬಾಯಿ. ಕನ್ನಡದಲ್ಲಿ ಅನೇಕ ವೈಜ್ಞಾನಿಕ ಕೃತಿಗಳನ್ನು ರಚಿಸಿದ್ದಾರೆ. ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಕೀಟ ವಿಜ್ಞಾನದಲ್ಲಿ ಎಂಎಸ್ಸಿ ಪದವಿ, ಅಮೇರಿಕಾದ ನ್ಯೂಯಾರ್ಕ್ ವಿಶ್ವವಿದ್ಯಾಲಯದಲ್ಲಿ ಪರಿಸರ ಮತ್ತು ಅರಣ್ಯ ವಿಜ್ಞಾವ ವಿಷಯದಲ್ಲಿ ಪಿಎಚ್.ಡಿ ಪದವಿ ಪಡೆದಿದ್ದಾರೆ. ರಾಜಸ್ಥಾನದ ಉದಯಪುರ ವಿಶ್ವವಿದ್ಯಾಲಯದ ಜಾಬ್ನೇರ ಕೃಷಿ ಕಾಲೇಜಿನಲ್ಲಿ ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಪಶ್ಚಿಮ ಬಂಗಾಳದ ಪ್ಲಾಸಿಯಲ್ಲಿ ಕಾಮನ್ ವೆಲ್ತ್ ಇನ್ಸ್ಟಿಟ್ಯೂಟ್ ...
READ MORE