ಕವಿ, ಲೇಖಕ ಎಚ್. ಎಸ್. ಶಿವಪ್ರಕಾಶ್ ಅವರ ಅಂಕಣ ಬರಹಗಳ ಮೂರನೆಯ ಸಂಪುಟ-ಬಯಲ ಜೋಳಿಗೆ. ಕಳೆದೆರಡು ವರ್ಷಗಳಿಂದ ‘ವಿಜಯ ಕರ್ನಾಟಕ’ದಲ್ಲಿ ಅಚ್ಚಾದ ಬರಹಗಳಿವು.ಲೇಖಕರ ಈಚಿನ ವಿಚಾರಗಳ ವಿಸ್ತಾರವನ್ನು ಓದಿಗೆ ಒದಗಿಸುತ್ತದೆ. ಎಲ್ಲ ವರ್ಗದ ಜನರ ಪರವಾಗಿ, ವರ್ತಮಾನದ ಬಿಕ್ಕಟುಗಳಿಗೆ ಇಲ್ಲಿಯ ಅಂಕಣದ ಮೂಲಕ ಸ್ಪಂದಿಸುವ ಬರಹಗಳು ಒಳಗೊಂಡಿವೆ.
ಕವಿ, ಸಾಹಿತಿ, ಲೇಖಕ ಎಚ್.ಎಸ್.ಶಿವಪ್ರಕಾಶ್ ಬೆಂಗಳೂರಿನಲ್ಲಿ 15-06-1954ರಂದು ಜನಿಸಿದರು. ತಂದೆ ಪ್ರಸಿದ್ಧ ಸಾಹಿತಿಗಳು ಮತ್ತು ಕನ್ನಡ ಪರಿಷತ್ತಿನ ಅಧ್ಯಕ್ಷರು ಆಗಿದ್ದ ಶಿವಮೂರ್ತಿ ಶಾಸ್ತ್ರಿಗಳು. ನವದೆಹಲಿಯ ಜೆ.ಎನ್.ಯು ವಿಶ್ವವಿದ್ಯಾಲಯದ ಸ್ಕೂಲ್ ಆಫ್ ಆರ್ಟ್ಸ್ ಅಂಡ್ ಈಸ್ತೆಟಿಕ್ಸ್ನಲ್ಲಿ ಪ್ರೋಫೆಸರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕಾವ್ಯ, ನಾಟಕ, ಅನುವಾದ ಹೀಗೆ ಸಾಹಿತ್ಯದ ಹಲವು ಪ್ರಕಾರಗಳಲ್ಲಿ ಕೃಷಿ ಮಾಡಿರುವ ಶಿವಪ್ರಕಾಶರು ತಮ್ಮ ನಾಟಕ ಮಹಾಚೈತ್ರೆ ರಚನೆಯಿಂದಾಗಿ ಸಾರ್ವಜನಿಕ ವಿರೋಧ ಎದುರಿಸುವಂತಾಯಿತು. ಅವರ ಪ್ರಮುಖ ನಾಟಕಗಳು- ಮಹಾಚೈತ್ರ, ಸುಲ್ತಾನ್ ಟಿಪ್ಪು, ಮಂಟೇಸ್ವಾಮಿ, ಮಾದರಿ ಮಾದಯ್ಯ, ಮದುವೆ ಹೆಣ್ಣು. ಶಿವಪ್ರಕಾಶರ ಕವನ ಸಂಕಲನಗಳು- ಮಳೆ ಬಿದ್ದ ...
READ MORE