ಕೋ. ಚೆನ್ನಬಸಪ್ಪನವರು ಬರೆದ ಕೃತಿ-ಬೇಡಿ ಕಳಚಿತು ದೇಶ ಒಡೆಯಿತು. ದೇಶದ ಸ್ವಾತಂತ್ಯ್ರ ಹೋರಾಟದ ಇತಿಹಾಸವನ್ನು ಸಮಗ್ರವಾಗಿ ಕಟ್ಟಿಕೊಡುವ ಕಾದಂಬರಿ. ಸ್ವಾತಂತ್ಯ್ರ ಪೂರ್ವ ಹಾಗೂ ನಂತರದ ಸ್ಥಿತಿಗಳನ್ನು ಹಾಗೂ ಮಹಾತ್ಮ ಗಾಂಧೀಜಿಯ ಸಂದೇಶಗಳ ಪರಿಣಾಮಗಳನ್ನು ವಿಶ್ಲೇಷಿಸುತ್ತದೆ. ಈ ಕೃತಿಗೆ ‘ಉಗ್ರಾಣ ಪ್ರಶಸ್ತಿ’- 2003 ದೊರೆತಿದೆ.
ನ್ಯಾಯಾಧೀಶರಾಗಿ, ಸಾಹಿತಿಗಳಾಗಿ, ಚಳುವಳಿಕಾರರಾಗಿ ನಾಡುನುಡಿಗೆ ಸೇವೆ ಸಲ್ಲಿಸಿರುವ ಕೋ. ಚೆನ್ನಬಸಪ್ಪ ಅವರು ಬಳ್ಳಾರಿ ಜಿಲ್ಲೆಯವರು. ತಾಯಿ ಬಸಮ್ಮ- ತಂದೆ ವೀರಣ್ಣ. 1922ರ ಫೆಬ್ರುವರಿ 27ರಂದು ಜನಿಸಿದರು. ಕಾಲೇಜು ಶಿಕ್ಷಣವನ್ನು ಅನಂತಪುರದಲ್ಲಿ ಪಡೆಯುತ್ತಿದ್ದಾಗ ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ಭಾಗವಹಿಸಿ ಶಾಲೆಗೆ ತಿಲಾಂಜಲಿಯಿತ್ತರು. ಅನಂತರ ವಿದ್ಯಾಭ್ಯಾಸ ಮುಂದುವರಿಸಿ ಬಿ.ಎ. ಮತ್ತು ಲಾ ಪದವಿಯನ್ನೂ ಹಾಗೂ ಎಂ.ಎ. ಪದವಿಯನ್ನೂ ಗಳಿಸಿದರು. 1946ರಲ್ಲಿ ಬಳ್ಳಾರಿ ಜಿಲ್ಲೆಯ ಡಿಸ್ಟ್ರಿಕ್ಟ್ ಕೋರ್ಟಿನಲ್ಲಿ ವಕೀಲರಾಗಿ ವೃತ್ತಿಜೀವನ ಪ್ರಾರಂಭಿಸಿದ ಇವರು 1965ರಲ್ಲಿ ಡಿಸ್ಟ್ರಿಕ್ಟ್ ಸೆಷನ್ ಜಡ್ಜ್ ಆಗಿ ಅಮೂಲ್ಯ ಸೇವೆಸಲ್ಲಿಸಿದರು. ಇವರು ಹಲವಾರು ಸಂಘ ಸಂಸ್ಥೆಗಳಲ್ಲಿ ಸಮಾಜಮುಖಿ ಸೇವೆ ...
READ MORE