ಬೇಲಾಡಿ ಹರಿಶ್ಚಂದ್ರ -ಲೇಖಕ ಪೆರ್ಲ ಗೋಪಾಲಕೃಷ್ಣ ಪೈ ಅವರ ಸಣ್ಣ ಕಥೆಗಳ ಸಂಕಲನ. ವೈವಿಧ್ಯಮಯ ಕಥಾ ವಸ್ತುಗಳಿದ್ದು, ನಿರೂಪಣಾ ಶೈಲಿ, ಪಾತ್ರಗಳ ಸೃಷ್ಟಿ, ಸನ್ನಿವೇಶಗಳ ಜೋಡಣೆ ಇತ್ಯಾದಿ ಸಾಹಿತ್ಯಕ ಅಂಶಗಳಿಂದ ಇಲ್ಲಿಯ ಕಥೆಗಳು ಓದುಗರ ಗಮನ ಸೆಳೆಯುತ್ತವೆ. ಬಸಂತಕುಮಾರ ನಿರ್ದೇಶನದಲ್ಲಿ ಬೇಲಾಡಿ ಹರಿಶ್ಚಂದ್ರ ಕಥೆಯು ಚಲನಚಿತ್ರವಾಗಿಯೂ ಗಮನ ಸೆಳೆದಿದೆ.
ಮೂಲತಃ ಕೇರಳದ ಕಾಸರಗೋಡು ಹಾಗೂ ಕರ್ನಾಟಕದ ದಕ್ಷಿಣ ಕನ್ನಡ ಮಧ್ಯೆ ಇರುವ ಪೆರ್ಲ ಮೂಲದ ಗೋಪಾಲಕೃಷ್ಣ ಪೈ ಅವರು ಕತೆ,ನಾಟಕ ,ಪ್ರಬಂದ, ಲೇಖನ ಕಾದಂಬರಿಗಳನ್ನು ಬರೆಯುವುದರಲ್ಲಿ ಪ್ರವೀಣರು. ನಾಟಕ ವಿಮರ್ಶೆ ಮೊದಲಾದ ಹಲವು ಪ್ರಕಾರಗಳಲ್ಲಿ ಕೈಯ್ಯಾಡಿಸಿ ಉತ್ತಮ ಸಾಹಿತ್ಯ ಕೃಷಿಯನ್ನು ಬೆಳೆಸುತ್ತಿರುವ ಗೋಪಾಲಕೃಷ್ಣ ಪೈ ಅವರ ಮತ್ತಿತರ ಕೃತಿಗಳು ಇಂತಿವೆ; ತಿರುವು, ಈ ಬೆರಳ ಗುರುತು, ಹಾರುವ ಹಕ್ಕಿಯ ಗೂಡಿನ ದಾರಿ ,ಮೊದಲಾದ ಚಿಕ್ಕ ಕಥೆಗಳು. ಆಧುನಿಕ ಚೀನೀ ಸಣ್ಣಕಥೆಗಳು, 'ಪೆರ್ಲ ಗೋಪಾಲಕೃಷ್ಣ ಪೈ'ರವರ ಸ್ವಪ್ನ ಸಾರಸ್ವತ ಕಾದಂಬರಿಗೆ 2010 ರ ಸಾಲಿನ 'ಪ್ರತಿಷ್ಠಿತ ಕೇಂದ್ರ ಸಾಹಿತ್ಯ ...
READ MORE