‘ಬೆಳಗೆರೆ ಜಾನಕಮ್ಮ’ ಬದುಕು- ಬರಹ. ಈ ಕೃತಿಯನ್ನು ಕರ್ನಾಟಕ ಲೇಖಕಿಯರ ಸಂಘವು ಹಮ್ಮಿಕೊಂಡಿದ್ದ ವಿಭಿನ್ನ ಕಾರ್ಯಯೋಜನೆಯಲ್ಲಿ ಪ್ರಕಟಿಸಿದೆ. ಕನ್ನಡದ ಹಿರಿಯ ದಿವಂಗತ ಲೇಖಕಿಯರ ಅಪ್ರಕಟಿತ ಕೃತಿಗಳನ್ನು ಪ್ರಕಟಿಸುವ ಯೋಜನೆಯಲ್ಲಿ ಪ್ರಥಮ ಕೃತಿಯಾಗಿ ಬೆಳಗೆರೆ ಜಾನಕಮ್ಮನವರ ಸಮಗ್ರ ಕವನ ಸಂಕಲನವನ್ನು ಪ್ರಕಟಿಸಿದೆ. ಈ ಶತಮಾನದ ಮೊದಲ ಭಾಗದಲ್ಲಿ ಬದುಕಿದ್ದು, ಕವನಗಳನ್ನು ರಚಿಸಿದ ಬೆಳಗೆರೆ ಜಾನಕಮ್ಮನವರ ಕವನಗಳನ್ನು ಸಂಗ್ರಹಿಸಲಾಗಿದೆ. ಸಂಘದ ಕಾರ್ಯದರ್ಶಿ ನೇಮಿಚಂದ್ರ ಅವರು ಈ ಕೃತಿಯನ್ನು ಸಂಪಾದಿಸಿದ್ದಾರೆ.
ಸ್ತ್ರೀವಾದಿ ಚಿಂತಕಿ, ಸಾಹಿತಿ ನೇಮಿಚಂದ್ರ ಅವರು ಜನಿಸಿದ್ದು 1959 ಜುಲೈ 16ರಂದು ಮೂಲತಃ ಚಿತ್ರದುರ್ಗದವರಾದ ಇವರು ವೃತ್ತಿಯಲ್ಲಿ ಇಂಜಿನಿಯರ್ ಆಗಿದ್ದರು. ಕರ್ನಾಟಕ ಲೇಖಕಿಯರ ಸಂಘದ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಜೀವನುತ್ಸಾಹ ತುಂಬುವಂತಹ ಇವರ ಕೃತಿಗಳೆಂದರೆ ನಮ್ಮ ಕನಸುಗಳಲ್ಲಿ ನೀವಿದ್ದೀರಿ, ಒಂದು ಶ್ಯಾಮಲ ಸಂಜೆ, ನೇಮಿಚಂದ್ರರ ಕಥೆಗಳು, ಸಾವೇ ಬರುವುದಿದ್ದರೆ ನಾಳೆ ಬಾ!, ನನ್ನ ಕಥೆ ನಮ್ಮ ಕಥೆ, ಯಾದ್ ವಶೇಮ್, ಮಹಿಳಾ ಅಧ್ಯಯನ, ದುಡಿವ ಹಾದಿಯಲಿ ಜೊತೆಯಾಗಿ, ಬೆಳಗೆರೆ ಜಾನಕಮ್ಮ ಬದುಕು-ಬರಹ, ಹೋರಾಟದ ಹಾದಿಯಲ್ಲಿ ಧೀಮಂತ ಮಹಿಳೆಯರು, ಬದುಕು ಬದಲಿಸಬಹುದು, ಒಂದು ಕನಸಿನ ಪಯಣ, ಪೆರುವಿನ ಪವಿತ್ರ ಕಣಿವೆಯಲ್ಲಿ, ಸಂತಸ ನನ್ನೆದೆಯ ಹಾಡು ಹಕ್ಕಿ (ಬದುಕು ಬದಲಿಸಬಹುದು ಭಾಗ -4), ಕಾಲುಹಾದಿಯ ಕೋಲ್ಮಿಂಚುಗಳು- ...
READ MORE