‘ಬೆಳ್ಳಿ’ ಲೇಖಕ ಡಾ.ಬಸವರಾಜ ಸಬರದ ಅವರ ನಾಟಕ. ಈ ನಾಟಕದಲ್ಲಿ ಬಸವಿ ಬಿಡುವ ಧಾರ್ಮಿಕ ಪದ್ಧತಿಯ ಹೆಸರಿನಲ್ಲಿ ನಡೆಯುವ ಶೋಷಣೆಯ ವಸ್ತುವಿದೆ. ಈ ಶೋಷಣೆಗೆ ವಿದ್ಯೆಯ ಮೂಲಕ ಬರುವ ಅರಿವೇ ಪರಿಹಾರವೆಂದು ಸೂಚಿಸಲಾಗಿದೆ. ಹೈದ್ರಾಬಾದ ಕರ್ನಾಟಕದ ಭಾಷೆಯನ್ನು ವಿಶೇಷವಾಗಿ ಬಳಸಲಾಗಿದೆ. ಆಡುಭಾಷೆಯಲ್ಲಿಯ ಸಂಭಾಷಣೆಗಳು ಜೀವಂತವಾಗಿವೆ. ಹಾಡುಗಳು ನಾಟಕಕ್ಕೆ ಮೆರಗನ್ನು ತಂದು ಕೊಟ್ಟಿವೆ.
ಬಸವರಾಜ ಸಬರದ ಅವರು ಮೂಲತಃ ಕೊಪ್ಪಳ ಜಿಲ್ಲೆ ಯಲಬುರ್ಗ ತಾಲ್ಲೂಕಿನ ಕುಕನೂರಿನವರು. ಹುಟ್ಟಿದ್ದು 1954 ಜೂನ್ 20ರಂದು. ತಾಯಿ ಬಸಮ್ಮ, ತಂದೆ ಬಸಪ್ಪ ಸಬರದ. ಹುಟ್ಟೂರು ಕುಕನೂರಿನಲ್ಲಿಯೇ ಪ್ರಾಥಮಿಕ ಶಿಕ್ಷಣ ಪಡೆದ ಇವರು ಕರ್ನಾಟಕ ವಿಶ್ವವಿದ್ಯಾಲಯದಿಂದ ಕನ್ನಡ ಭಾಷೆಯಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿಎಚ್‌ಡಿ ಪದವಿ ಪಡೆದರು. ಉಪನ್ಯಾಸಕರಾಗಿ ವೃತ್ತಿ ಆರಂಭಿಸಿದ ಇವರು ಹಲವಾರು ಕಾಲೇಜುಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಶೈಕ್ಷಣಿಕವಾಗಿ ಮಾತ್ರವಲ್ಲದೇ ದೇವದಾಸಿ ವಿಮೋಚನಾ ಹೋರಾಟ, ಅಂತರ್ಜಾತಿ ವಿವಾಹಗಳಿಗೆ ಪ್ರೋತ್ಸಾಹ, ಅಸ್ಪೃಶ್ಯತಾ ನಿವಾರಣೆ, ದಲಿತ-ಬಂಡಾಯ ಚಳವಳಿ ಮುಂತಾದ ಸಾಮಾಜಿಕ ಹೋರಾಟಗಳಲ್ಲಿಯೂ ತೊಡಗಿಸಿಕೊಂಡಿದ್ದಾರೆ. ನನ್ನವರ ಹಾಡು, ಹೋರಾಟ, ...
READ MORE