ʼಬೆಳ್ಳಿ ತೆರೆʼ ಕಾದಂಬರಿಯು ಲೇಖಕಿ ಉಷಾ ನವರತ್ನರಾಂ ಅವರಿಂದ ರಚಿತವಾಗಿದೆ. ಚಿತ್ರದೀಪ ಸಾಪ್ತಾಹಿಕ ಪತ್ರಿಕೆಯಲ್ಲಿ ಧಾರಾವಾಹಿಯಾಗಿ ಮೂಡಿ ಬಂದಿತ್ತು. ಬೆಳ್ಳಿ ತೆರೆಯ ಮೇಲೆ ಮೂಡಿ ಬರುವ ಚಿತ್ರ ಅದೆಷ್ಟು ಸುಂದರವಾಗಿದ್ದರೂ ತೆರೆ ಮರೆಯ ಜೀವನದಲ್ಲಿನ ನೋವು-ನಲಿವು, ಸಿಹಿ-ಕಹಿಗಳ ಬಗೆಗಿನ ಕತೆಯನ್ನು ಈ ಕಾದಂಬರಿಯು ಒಳಗೊಂಡಿದೆ. ಬೆಳ್ಳಿ ತೆರೆಯ ನಾಯಕಿಯನ್ನು ಕಥೆಯ ಕೇಂದ್ರವನ್ನಾಗಿಸಿ ಲೇಖಕಿಯು ಕಾದಂಬರಿಯನ್ನು ರಚಿಸಿದ್ದಾರೆ. ಪ್ರೇಕ್ಷಕನ ದೃಷ್ಠಿ ಮತ್ತು ನಾಯಕಿಯ ಜೀವನ ಇವೆರಡರ ವ್ಯತ್ಯಾಸವನ್ನು ಇಲ್ಲಿ ಕಾಣಬಹುದು.
ಲೇಖಕಿ ಉಷಾ ನವರತ್ನರಾಂ ಅವರು ಹುಟ್ಟಿದ್ದು ಬೆಂಗಳೂರಿನಲ್ಲಿ. ತಂದೆ- ಎಂ.ವಿ. ಸುಬ್ಬರಾವ್. ತಾಯಿ- ಶಾಂತಾ. ಪ್ರಾರಂಭಿಕ ಶಿಕ್ಷಣವನ್ನು ಶಿವಮೊಗ್ಗದ ಮೇರಿ ಇಮ್ಯಾಕುಲೇಟ್ ಕಾನ್ವೆಂಟ್ ಹಾಗೂ ಬೆಂಗಳೂರಿನ ಮಹಿಳಾ ಸೇವಾ ಸಮಾಜದಲ್ಲಿ ಪೂರ್ಣಗೊಳಿಸಿದರು. ಆನಂತರ ಮೌಂಟ್ ಕಾರ್ಮಲ್ ಕಾಲೇಜಿನಿಂದ ಇಂಗ್ಲಿಷ್ ಸಾಹಿತ್ಯ ಹಾಗೂ ಇತಿಹಾಸದಲ್ಲಿ ಪದವಿ ಪಡೆದರು. ಪತ್ರಿಕೋದ್ಯಮದಲ್ಲಿ ಡಿಪ್ಲೊಮಾ ಪೂರೈಸಿದರು. ವಿದ್ಯಾರ್ಥಿನಿಯಾಗಿದ್ದಾಗಲೇ ಹಲವು ಲೇಖನಗಳನ್ನು ಪ್ರಕಟಿಸಿದರು. ಇಂಗ್ಲಿಷ್ ಮತ್ತು ಕನ್ನಡ ಪತ್ರಿಕೆಗಳ ಅಂಕಣಗಾರ್ತಿಯಾಗಿದ್ದು, ಗೆಳತಿ ಮತ್ತು ಉಷಾ ಪತ್ರಿಕೆಗಳ ಸಂಪಾದಕಿಯಾಗಿದ್ದರು. ಮಹಿಳಾ ಸೇವಾ ಸಮಾಜದಲ್ಲಿ ಅಧ್ಯಾಪಕಿಯಾಗಿ 27 ವರ್ಷ ಸೇವೆ ಸಲ್ಲಿಸಿ, ಸ್ವಯಂ ನಿವೃತ್ತಿ ಪಡೆದರು. ನಾಲ್ಕು ವರ್ಷ ರೀಜನಲ್ ಫಿಲಂ ಸೆನ್ಸಾರ್ ...
READ MORE