ಹಿರಿಯ ಪತ್ರಕರ್ತ ಹಾಗೂ ಲೇಖಕ ಜಾಣಗೆರೆ ವೆಂಕಟರಾಮಯ್ಯ ಅವರ ಕೃತಿ-ಬೆಂಗಳೂರು ಕೆಂಪೇಗೌಡ. ಬೆಂಗಳೂರು ನಿರ್ಮಾತೃ ಕೆಂಪೇಗೌಡನ ಐತಿಹಾಸಿಕ ಮಾಹಿತಿ ಇಲ್ಲಿದೆ. ಬೆಂಗಳೂರು ಕಟ್ಟಿದ ನಂತರದ ದಿನಮಾನದಲ್ಲಿ ಆಳಿದ ಅರಸರ ಕೊಡುಗೆಗಳ ವಿವರವನ್ನು ಒಳಗೊಂಡಿದೆ. ಬೆಂಗಳೂರಿನ ಪ್ರವಾಸಿ ತಾಣಗಳನ್ನು ಏಕಕಾಲಕ್ಕೆ ಪರಿಚಯಿಸುವ ಕೃತಿ ಇದು.
ಹಿರಿಯ ಪತ್ರಕರ್ತ, ಲೇಖಕ ಜಾಣಗೆರೆ ವೆಂಕಟರಾಮಯ್ಯ ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಜಾಣಗೆರೆಯವರು. ಓದಿದ್ದು ಬಿ.ಕಾಂ ಆದರೂ ಸಾಹಿತ್ಯ ಹಾಗೂ ಪತ್ರಿಕೋದ್ಯಮ ಅವರ ಆಸಕ್ತಿದಾಯಕ ಕ್ಷೇತ್ರವಾಗಿತ್ತು. ಪತ್ರಕರ್ತರಾಗಿ ಪ್ರಪಾತ, ನನ್ನ ನಲ್ಲ ನನ್ನ ಜನ, ಕಪ್ಪು ನ್ಯಾಯ, ದಡ, ನೆಲೆ, ಗರ, ಮಹಾನದಿ, ಮಾಯಾನಗರಿಯಲ್ಲಿ ಮಾಯಾಶಿಲ್ಲಿ, ಸುಡುಗುಂಡುಗಳ ನಾಡಲ್ಲಿ ಶಾಂತಿಯ ಕನಸು, ಸವೆಯದ ಹಾದಿ, ಎದೆಯಾಳ, ಬೆಂಕಿ ಮತ್ತು ಬೆಳಕು ಇವರ ಪ್ರಮುಖ ಕೃತಿಗಳು. ಇವರಿಗೆ ವಿ.ನಾಗರಾಜರಾವ್ ಸಮೂಹ ಮಾಧ್ಯಮ ಪ್ರಶಸ್ತಿ, ಕನ್ನಡ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಎಚ್.ಕೆ. ವೀರಣ್ಣಗೌಡ ಪ್ರಶಸ್ತಿ, ವಿ.ಚಿ. ಸಾಹಿತ್ಯ ಪ್ರತಿಷ್ಠಾನದ ಪ್ರಶಸ್ತಿ, ...
READ MORE