ಪತ್ರಕರ್ತ ಹಾಗೂ ಲೇಖಕ ಪ್ರತಾಪಸಿಂಹ ಅವರು ವಿಜಯಕರ್ನಾಟಕ ದಿನಪತ್ರಿಕೆಯಲ್ಲಿ ಬರೆದ ಅಂಕಣ ಬರಹಗಳ ಸಂಗ್ರಹ ಕೃತಿ-ಬೆತ್ತಲೆ ಜಗತ್ತು ಭಾಗ-4. ಶಿಕ್ಷಣ, ರಾಜಕೀಯ, ಸಮಾಜ ಹಾಗೂ ಧಾರ್ಮಿಕ ವಸ್ತು ವೈವಿಧ್ಯತೆಯ ಬರಹಗಳು, ಲೇಖಕರ ನಿರೂಪಣಾ ಶೈಲಿಯಿಂದ, ಸಮರ್ಥನೆಯ ಗಟ್ಟಿತನದಿಂದಾಗಿ, ಇಂದಿಗೂ ತಾಜಾತನವನ್ನು ಉಳಿಸಿಕೊಡು ಬಂದಿವೆ. ಇಲ್ಲಿಯ ಪ್ರತಿ ಬರಹವೂ ವಿಚಾರ ಪ್ರಚೋದಕವಾಗಿದೆ.
ಪ್ರತಾಪ್ ಸಿಂಹ ಮೂಲತಃ ಸಕಲೇಶಪುರದವರು. ಪದವಿ ಪೂರ್ವ ಶಿಕ್ಷಣವನ್ನು ಚಿಕ್ಕಮಗಳೂರಿನಲ್ಲಿ ಮುಗಿಸಿ, ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯಲ್ಲಿರುವ ಎಸ್.ಡಿ.ಎಂ ಕಾಲೇಜಿನಿಂದ ಮನಃಶಾಸ್ತ್ರ ಹಾಗೂ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದಾರೆ. ಎಂಸಿಜೆ ಮಂಗಳೂರಿನಿಂದ ಪತ್ರಿಕೋದ್ಟಮದಲ್ಲಿ ಸ್ನಾತ್ತಕೋತ್ತರ ಪದವಿ ಹಾಗೂ ಎಂ ಐ ಸಿ ಇ ಮಂಗಳೂರಿನಿಂದ ಕಂಪ್ಯೂಟರ್ ಅಪ್ಲಿಕೇಷನ್ಸ್ ಡಿಪ್ಲೊಮಾ ಪೂರ್ಣಗೊಳಿಸಿದ್ದಾರೆ. ವಿಜಯ ಕರ್ನಾಟಕದಲ್ಲಿ ಬೆತ್ತಲೆ ಜಗತ್ತು, ಕನ್ನಡಪ್ರಭದಲ್ಲಿ ಸುದ್ದಿ ಸಂಪಾದಕರಾಗಿ ಬೆತ್ತಲೆ ಪ್ರಪಂಚ ಅಂಕಣ ಬರೆಯುತ್ತಿದ್ದರು. ಬೆತ್ತಲೆ ಜಗತ್ತು- 14 ಪುಸ್ತಕಗಳು ( ಅಂಕಣ ಬರಹಗಳ ಸಂಗ್ರಹ), ನರೇಂದ್ರ ಮೋದಿ (ಯಾರೂ ತುಳಿಯದ ಹಾದಿ), ಟಿಪ್ಪು ಸುಲ್ತಾನ ಸ್ವಾತಂತ್ರವೀರನಾ, ಮೈನಿಂಗ್ ಮಾಫಿಯಾ, ಮೋದಿ ಮುಸ್ಲಿಂ ...
READ MORE