ಪತ್ರಕರ್ತ ಪ್ರತಾಪ ಸಿಂಹ ಅವರು ವಿಜಯ ಕರ್ನಾಟಕ ಪತ್ರಿಕೆಗೆ ಬರೆದ ಅಂಕಣ ಬರಹಗಳ ಸಂಗ್ರಹ ಕೃತಿ-ಬೆತ್ತಲೆ ಜಗತ್ತು ಭಾಗ-13. ತಮ್ಮ ಪ್ರಖರ ವೈಚಾರಿಕತೆ, ನೇರ ಹಾಗೂ ದಿಟ್ಟ ಬರಹ ಶೈಲಿಯಿಂದ, ವಿಷಯ ವೈವಿಧ್ಯತೆಯೊಂದಿಗೆ ವಿಚಾರಗಳನ್ನು ಅಂಕಣಗಳ ಮೂಲಕ ವ್ಯಕ್ತಪಡಿಸುತ್ತಿದ್ದ ಬರಹಗಳಲ್ಲಿ ಪೂರ್ವಗ್ರಹಗಳಿಲ್ಲದಂತೆ ಎಚ್ಚರವಹಿಸುತ್ತವೆ. ಹೀಗಾಗಿ, ಈ ಅಂಕಣ ಬರಹಗಳು ಎಂದಿಗೂ ಅಪ್ರಸ್ತುತ ಎನಿಸುವುದಿಲ್ಲ.
ಪ್ರತಾಪ್ ಸಿಂಹ ಮೂಲತಃ ಸಕಲೇಶಪುರದವರು. ಪದವಿ ಪೂರ್ವ ಶಿಕ್ಷಣವನ್ನು ಚಿಕ್ಕಮಗಳೂರಿನಲ್ಲಿ ಮುಗಿಸಿ, ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯಲ್ಲಿರುವ ಎಸ್.ಡಿ.ಎಂ ಕಾಲೇಜಿನಿಂದ ಮನಃಶಾಸ್ತ್ರ ಹಾಗೂ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದಾರೆ. ಎಂಸಿಜೆ ಮಂಗಳೂರಿನಿಂದ ಪತ್ರಿಕೋದ್ಟಮದಲ್ಲಿ ಸ್ನಾತ್ತಕೋತ್ತರ ಪದವಿ ಹಾಗೂ ಎಂ ಐ ಸಿ ಇ ಮಂಗಳೂರಿನಿಂದ ಕಂಪ್ಯೂಟರ್ ಅಪ್ಲಿಕೇಷನ್ಸ್ ಡಿಪ್ಲೊಮಾ ಪೂರ್ಣಗೊಳಿಸಿದ್ದಾರೆ. ವಿಜಯ ಕರ್ನಾಟಕದಲ್ಲಿ ಬೆತ್ತಲೆ ಜಗತ್ತು, ಕನ್ನಡಪ್ರಭದಲ್ಲಿ ಸುದ್ದಿ ಸಂಪಾದಕರಾಗಿ ಬೆತ್ತಲೆ ಪ್ರಪಂಚ ಅಂಕಣ ಬರೆಯುತ್ತಿದ್ದರು. ಬೆತ್ತಲೆ ಜಗತ್ತು- 14 ಪುಸ್ತಕಗಳು ( ಅಂಕಣ ಬರಹಗಳ ಸಂಗ್ರಹ), ನರೇಂದ್ರ ಮೋದಿ (ಯಾರೂ ತುಳಿಯದ ಹಾದಿ), ಟಿಪ್ಪು ಸುಲ್ತಾನ ಸ್ವಾತಂತ್ರವೀರನಾ, ಮೈನಿಂಗ್ ಮಾಫಿಯಾ, ಮೋದಿ ಮುಸ್ಲಿಂ ...
READ MORE