ಲೇಖಕ ಜಿ.ಬಿ. ಹರೀಶ್ ಅವರ ಕೃತಿ-ಭಾರತೀಯ ತಂತ್ರಶಾಸ್ತ್ರದ ಪರಿಚಯ. ತಂತ್ರಶಾಸ್ತ್ರವು ಭಾರತೀಯ ಪ್ರಾಚೀನ ಪರಂಪರೆಯ ಜ್ಞಾನದ ವಲಯವೂ ಹೌದು. ಈ ತಂತ್ರಶಾಸ್ತ್ರದಲ್ಲಿ ನಿಗೂಢತೆಯ ಜ್ಞಾನವಿದ್ದು, ಅದಿನ್ನೂ ಸಂಶೋಧನೆಗೆ ಒಳಪಡಬೇಕಿದೆ. ತಂತ್ರಗಳು, ತಂತ್ರಗಳ ಪ್ರಕಾರಗಳು ಹಾಗೂ ಅವುಗಳ ವಿಶ್ಲೇಷಣೆ ಇತ್ಯಾದಿ ಕುರಿತು ಚರ್ಚಿಸಿದ ವಿಚಾರಗಳನ್ನು ಲೇಖಕರು ಇಲ್ಲಿ ನೀಡಿದ್ದಾರೆ.
ಜಿ.ಬಿ ಹರೀಶ್ ಅವರು ಹೊಸ ತಲೆಮಾರಿನ ಗಂಭೀರ ವಿಮರ್ಶಕರಲ್ಲಿ ಒಬ್ಬರು. ಕನ್ನಡ ಕಾವ್ಯಗಳು, ಜೈನ, ಬೌದ್ಧ ಮತ್ತು ಶಾಸ್ತ್ರ ಸಾಹಿತ್ಯ ವಿಷಯಗಳಲ್ಲಿ ವಿಶೇಷ ಪರಿಣತಿ ಪಡೆದಿದ್ದಾರೆ. ಮೈಸೂರು ವಿ.ವಿ.ಯಿಂದ ಕನ್ನಡ ಸ್ನಾತಕೋತ್ತರ ಪದವಿಯನ್ನು ಪಡೆದು ಕೊಂಡ ಇವರು ದೇವಚಂದ್ರನ ರಾಜಾವಳಿ ಕಥಾಸಾರ: ಜೈನ ಸಾಹಿತ್ಯಕ, ಸಾಂಸ್ಕೃತಿಕ ಮತ್ತು ಐತಿಹಾಸಿಕ ಅಧ್ಯಯನ ಎಂಬ ವಿಷಯದಲ್ಲಿ ಪಿಎಚ್.ಡಿ. ಪದವಿ ಪಡೆದಿದ್ದಾರೆ. ಸಾಹಿತ್ಯ, ಕಲೆ ಮತ್ತು ತತ್ವಶಾಸ್ತ್ರ ಇವರ ಆಸಕ್ತಿಯ ಕ್ಷೇತ್ರಗಳು, ತುಮಕೂರು ವಿ.ವಿ., ಬೆಂಗಳೂರಿನ ಶೇಷಾದ್ರಿಪುರಂ ಸ್ನಾತಕೋತ್ತರ ಕೇಂದ್ರ, ಎಂ.ಇ.ಎಸ್. ಸ್ನಾತಕೋತ್ತರ ಕೇಂದ್ರ, ಬಿ.ಎಂ.ಶ್ರೀ. ಸ್ಮಾರಕ ಪ್ರತಿಷ್ಠಾನ ಸೇರಿದಂತೆ ಹಲವು ...
READ MORE