‘ಭಗ್ನಪ್ರೇಮಿಯ ಅಪೂರ್ಣ ಡೈರಿ’ ಜೋಗಿಯವರ ಕಾದಂಬರಿಯಾಗಿದೆ. ಇದಕ್ಕೆ ಸಚಿನ್ ತೀರ್ಥಹಳ್ಳಿಯವರ ಬೆನ್ನುಡಿ ಬರಹವಿದೆ; ಒಬ್ಬ ಭಗ್ನಪ್ರೇಮಿಯ ನೋವನ್ನು ಇನ್ನೊಬ್ಬ ಭಗ್ನಪ್ರೇಮಿ ಮಾತ್ರ ಅರ್ಥಮಾಡಿಕೊಳ್ಳಲು ಸಾಧ್ಯ. ಅಂತಹದೇ ಒಬ್ಬ ಭಗ್ನಪ್ರೇಮಿಯ ಖಾಸಗಿ ನೋವಿನ ಡೈರಿಯ ಪುಟಗಳು ಇಲ್ಲಿವೆ. ಇದನ್ನು ಓದಿ ನವಪ್ರೇಮಿಗಳು ಇಲ್ಲಿಂದಲೆ ಎಚ್ಚರ ವಹಿಸಬಹುದು. ಈಗಾಗಲೇ ಭಗ್ನಗೊಂಡವರು ನಮ್ಮಂಥವರು ಹಲವರಿದ್ದಾರೆ ಎಂದು ಸಮಾಧಾನ ಪಟ್ಟುಕೊಳ್ಳಬಹುದು ಎಂಬುವುದನ್ನು ಈ ಪುಸ್ತಕದಲ್ಲಿ ನೋಡಬಹುದು.
ಜೋಗಿ, ಜಾನಕಿ, ಎಚ್. ಗಿರೀಶ್ ರಾವ್, ಸತ್ಯವ್ರತ...... ಹೀಗೆ ವಿವಿಧ ಅಂಕಿತನಾಮಗಳ ಮೂಲಕವೇ ಓದುಗರನ್ನು ತಲುಪಿದವರು ಗಿರೀಶ್ ರಾವ್ ಹತ್ವಾರ್ (ಜೋಗಿ). ವೃತ್ತಿಯಲ್ಲಿ ಪತ್ರಕರ್ತರಾಗಿರುವ ಜೋಗಿ ಅವರು ಹುಟ್ಟಿದ್ದು 1965 ನವೆಂಬರ್ 16ರಂದು. ಮೂಲತಃ ಸೂರತ್ಕಲ್ ಸಮೀಪದ ಹೊಸಬೆಟ್ಟು ಊರಿನವರಾದ ಇವರು ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಹಾಯ್ ಬೆಂಗಳೂರು ವಾರಪತ್ರಿಕೆಯಲ್ಲಿ ‘ರವಿ ಕಾಣದ್ದು’, ‘ಜಾನಕಿ ಕಾಲಂ’ ಅಂಕಣ ಬರಹಗಳ ಮೂಲಕ ಓದುಗರಿಗೆ ಪರಿಚಯವಾದ ಜೋಗಿ ಅವರು ಪ್ರಸ್ತುತ ಕನ್ನಡ ಪ್ರಭ ದಿನಪತ್ರಿಕೆಯಲ್ಲಿ ಪುರವಣಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ವೃತ್ತಿ ಜೊತೆ ಜೊತೆಗೆ ಸಾಹಿತ್ಯ ಕೃಷಿಯಲ್ಲಿ ತೊಡಗಿಸಿಕೊಂಡಿರುವ ಇವರು ಹಲವಾರು ಕೃತಿಗಳನ್ನು ...
READ MORE