‘ಭಕ್ತಿಗೀತೆಗಳು’ ತಿಲಕ ಅವರ ಭಕ್ತಿಗೀತೆಗಳ ಸಂಕಲನವಾಗಿದೆ. ಈ ಕೃತಿಯಲ್ಲಿ ಹಲವಾರು ಭಕ್ತಿಗೀತೆಗಳನ್ನು ಕಾಣಬಹುದು. ಗಜಾನನ ಸ್ತವನ, ಶಕ್ತಿ ಸ್ತವನ, ಶಿವನ ಸ್ತವನ, ವಿಠಲ ಸ್ತವನ, ರಾಮ ಸ್ತವನ, ಕೃಷ್ಣ ಸ್ತವನ, ವೆಂಕಟೇಶ ಸ್ತವನ, ಮಾರುತಿ ಸ್ತವನ, ಗುರು ಸ್ತವನ ವನ್ನು ಇಲ್ಲಿ ನೀಡಲಾಗಿದೆ.
ಕೇರಳದಲ್ಲಿ ಹುಟ್ಟಿ, ಚಿತ್ರದುರ್ಗ ಜಿಲ್ಲೆಯ, ಹೊಳಲ್ಕೆರೆ ತಾಲ್ಲೂಕಿನ ಮಲ್ಲಾಡಿ ಹಳ್ಳಿಯಲ್ಲಿದ್ದು, ತಿರುಕ ಎಂ ಕಾವ್ಯನಾಮದೊಂದಿಗೆ ಬೆಳೆದವರು. ತಂದೆ ಅನಂತ ಪದ್ಮನಾಭ ನಂಬೂದರಿ, ತಾಯಿ ಪದ್ಮಂಬಾಳ್. ಈ ಮಗುವಿಗೆ ದೇಹ ವಿಕಾರ ಹಾಗೂ ಮೆದುಳಿನ ಬೆಳವಣಿಗೆ ಸರಿಯಾಗಿರಲಿಲ್ಲ. ಮೂಕಾಂಬಿಕ ದರ್ಶನಕ್ಕೆ ಬಂದಿದ್ದ ದಂಪತಿ ಬಾರಕೂರಿನಲ್ಲಿ ತಂಗಿದ್ದರು. ಆ ಹಾದಿಯಲ್ಲಿ ಉಡುಪಿಗೆ ಹೊರಟಿದ್ದ ಮಂತ್ರಾಲಯದ ಪೀಠಸ್ಥ ಸ್ವಾಮಿಗಳು ಈ ಮಗುವನ್ನು ಕಂಡು ಕೀರ್ತಿವಂತನಾಗುವುದಾಗಿ ಹರಸುತ್ತಾರೆ. ತಂದೆ ಈ ಮಗುವನ್ನು ಸಾಕಲಾಗದೆ ಅತಿಥೇಯರಾಗಿದ್ದ ನರಸಿಂಹಯ್ಯ – ಪುತಲೀ ಬಾಯಿ ಅವರಿಗೆ ದತ್ಯತು ಕೊಟ್ಟು ಯಾತ್ರೆ ಹೊರಡುತ್ತಾರೆ. ಈ ಮಗು ಮುಂದೆ ರಾಘವೇಂದ್ರ ಎಂದು ನಾಮಕರಣವಾಗುತ್ತದೆ. ಕುಂದಾಪುರದ ಶಾಲೆಗೆ. ...
READ MORE