‘ಭಾರತದಲ್ಲಿ ಚಲನಚಿತ್ರ ಸಂಸ್ಕೃತಿಯ ಪ್ರಸ್ತುತ ಸನ್ನಿವೇಶ’ ಕೃತಿಯು ಎಸ್. ದಿವಾಕರ್ ಅವರ ಅನುವಾದಿತ ಕೃತಿಯಾಗಿದೆ. ಮೂಲ ಕೃತಿಕಾರ ಸತೀಶ್ ಬಹಾದುರ್ ಅವರ ಈ ಕೃತಿಯಲ್ಲಿ ಕೆಲವೊಂದು ವಿಚಾರಗಳು ಹೀಗಿವೆ : ಚಲನಚಿತ್ರ ಸಂಸ್ಕೃತಿಯ ಚಾರಿತ್ರಿಕ ವಿಕಾಸದ ಹಿನ್ನೆಲೆಯಲ್ಲಿ, ಭಾರತದಲ್ಲಿ ಚಲನಚಿತ್ರದ ಸಾಂಸ್ಕೃತಿಕ ಹಾಗೂ ರಸಾಭಿಜ್ಞತೆಯ ಸಂಬಂಧಗಳನ್ನು ಈ ಲೇಖನ ಪರಿಶೀಲಿಸುತ್ತದೆ. ಭಾರತದಲ್ಲಿ ತಲೆದೋರುತ್ತಿರುವ ರಾಷ್ಟ್ರೀಯ ಚಲನಚಿತ್ರ ನೀತಿಯಲ್ಲಿ ಭವಿಷ್ಯತ್ ಕ್ರಮಗಳನ್ನು ರೂಪಿಸುವುದಕ್ಕಾಗಿ ಇಲ್ಲಿ ಕೆಲವು ಹಿನ್ನೆಲೆಯ ವಿಚಾರಗಳನ್ನೂ ಮಂಡಿಸಲಾಗಿದೆ.
ಎಸ್. ದಿವಾಕರ್ ಅವರು 28 ನವೆಂಬರ್ 1944 ರಲ್ಲಿ ಜನಿಸಿದರು. ಹುಟ್ಟಿದ್ದು ಬೆಂಗಳೂರು ಜಿಲ್ಲೆಯ ಸೋಮತ್ತನಹಳ್ಳಿಯಲ್ಲಿ. ಸಣ್ಣಕಥೆ, ಕಾವ್ಯ, ಪ್ರಬಂಧ, ವಿಮರ್ಶೆ, ಅಂಕಣ ಬರಹ, ಭಾಷಾಂತರ, ಸಂಪಾದನೆ ಇವೆಲ್ಲದರಲ್ಲಿ ಸ್ವೋಪಜ್ಞತೆ ಮತ್ತು ವಿಶಿಷ್ಟತೆ ಮೆರೆದಿರುವ ಎಸ್. ದಿವಾಕರ್, ಸವಿಸ್ತಾರ ಓದಿನ ಜಾಗೃತ ಮನಸ್ಸಿನ ಲೇಖಕರು. ಸುಧಾ, ಪ್ರಜಾವಾಣಿ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಅಮೆರಿಕನ್ ಕಾನ್ಸುಲೇಟ್ ಕಚೇರಿಯಲ್ಲಿ ಕನ್ನಡ ಸಂಪಾದಕರಾಗಿ ಕಾರ್ಯನಿರ್ವಹಿಸಿದ್ದಾರೆ. ಇವರ ಪ್ರಕಟಿತ ಕೃತಿಗಳಾದ ಇತಿಹಾಸ, ಎಲ್ಲ ಬಲ್ಲವರಿಲ್ಲ ಈ ಊರಿನಲ್ಲಿ ಆಯ್ದ ಕತೆಗಳು (ಕಥಾ ಸಂಕಲನಗಳು), ಆತ್ಮಚರಿತ್ರೆಯ ಕೊನೆಯ ಪುಟ (ಕವನ ಸಂಕಲನ), ನಾಪತ್ತೆಯಾದ ಗ್ರಾಮಾಫೋನು, ಕೃಷ್ಣಲೀಲೆಯಿಂದ ರಾಮರಾಜ್ಯಕ್ಕೆ ...
READ MORE