ಲೇಖಕ ಟಿ. ಎಸ್. ಗೋಪಾಲ್ ಅವರು ಬರೆದಿರುವ ಕೃತಿ ʼಭಾರತೀಯ ಕಾವ್ಯ ಮೀಮಾಂಸೆʼ. ಪುಸ್ತಕದ ಬಗ್ಗೆ ಲೇಖಕರೇ ಹೇಳುವಂತೆ, ಇದು ಕನ್ನಡ ಕಲಿಕೆಯ ಪುಸ್ತಕವಾಗಿದೆ. ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು, ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು.
©2024 Book Brahma Private Limited.