‘ಭರತೇಶ ವೈಭವ ಸಂಗ್ರಹ’ ಮಹಾಕವಿ ರತ್ನಾಕರವರ್ಣಿಯ ಮೇಲು ಕೃತಿ -ಭರತೇಶ ವೈಭವದ ಸಂಗ್ರಹ. ಹಿರಿಯ ಲೇಖಕ ತ.ಸು.ಶಾಮರಾಯರು ಸಂಪಾದಿಸಿದ್ದಾರೆ. ಸಾಂಗತ್ಯ ರೂಪದಲ್ಲಿರುವ ಭರತೇಶ ವೈಭವ ಆದಿತೀರ್ಥಂಕರ ವೃಷಭನಾಥನ ಮಗ ಭರತನನ್ನು ನಾಯಕನನ್ನಾಗಿರಿಸಿ ರಚಿಸವಾಗಿರುವ ಕೃತಿ. ಭರತನ ಇಡೀ ಕತೆಯನ್ನು ಅತ್ಯಂತ ವಿಭಿನ್ನ ಶೈಲಿಯಲ್ಲಿ ಈ ಕೃತಿ ಕಟ್ಟಿಕೊಟ್ಟಿದೆ.
ತ.ಸು.ಶಾಮರಾಯರು ಕನ್ನಡದ ಪ್ರಮುಖ ಸಾಹಿತಿಗಳು ಮತ್ತು ವಿದ್ವಾಂಸರು. ಇವರು (12-06-1906) ಜನಿಸಿದ್ದು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ತಳಕು ಗ್ರಾಮದಲ್ಲಿ. ತಂದೆ ಸುಬ್ಬಣ್ಣ ಮತ್ತು ತಾಯಿ ಲಕ್ಷ್ಮಿದೇವಮ್ಮ. ಬಿ.ಎ.ಆನರ್ಸ್ ಪದವಿಯನ್ನು ಚಿನ್ನದ ಪದಕದೊಂದಿಗೆ ಪಡೆದು, ಕಾಲೇಜ್ ಅಧ್ಯಾಪಕರಾದರು. ಕುವೆಂಪು ಮಾರ್ಗದರ್ಶನದಲ್ಲಿ , 'ಕನ್ನಡ ನಾಟಕ ಎಂಬ ಪ್ರಬಂಧ ಮಂಡಿಸಿ ಎಂ.ಎ. ಪದವಿ ಪಡೆದು, ಪ್ರಾಧ್ಯಾಪಕ ವೃತ್ತಿ ಕೈಗೊಂಡರು. ಮೈಸೂರು ವಿ.ವಿ. ಪ್ರಸಾರಾಂಗದ ನಿರ್ದೇಶಕ, ಮಹಾ ಗ್ರಂಥಪಾಲಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ವ್ಯಾಕರಣ ಕೋಶಕ್ಕೆ ಸಂಬಂಧಿಸಿದ ಐದು ಕೃತಿಗಳು, ಕನ್ನಡ ನಾಟಕ, ಜನಪ್ರಿಯ ಕನ್ನಡ ಸಾಹಿತ್ಯ ಚರಿತ್ರೆ, ವಿಮರ್ಶಾ ಗ್ರಂಥಗಳು, ಅಜಿತ ಪುರಾಣ ಸಂಗ್ರಹ, ಅರಣ್ಯ ಪುರಾಣ ಸಂಗ್ರಹ ( ಇದೇ ರೀತಿ 11 ಕಾವ್ಯ ಸಂಗ್ರಹಗಳು), ಮಂಕನ ಮಡದಿ ...
READ MORE