ಡಿ.ವಿ.ಗುಂಡಪ್ಪ (ಡಿವಿಜಿ) ಅವರ ರಚಿಸಿದ ಕೃತಿ-ಭಾರತ ಭೂ ವಂದನಂ. ಬ್ರಿಟೀಷರ ಈಸ್ಟ್ ಇಂಡಿಯಾ ಕಂಪನಿಯ ಅಧಿಕಾರಿಗಳೊಂದಿಗೆ ಪತ್ರ ವ್ಯವಹಾರವೂ ಮಾಡಿದ್ದ ಅವರು ಭಾರತ ದೇಶದ ವೈಭವದ ಇತಿಹಾಸವನ್ನು-ಸಂಸ್ಕೃತಿಯನ್ನು ಮನವರಿಕೆ ಮಾಡಿಸಿಕೊಟ್ಟಿದ್ದು, ಭಾರತವು ಪರಕೀಯರ ಪ್ರಾಬಲ್ಯವನ್ನು ಸಹಿಸುವುದಿಲ್ಲ ಎಂದೂ ಹೇಳಿದ್ದರು. ಅದಕ್ಕೆ ಪೂರಕವಾಗಿ ಭಾರತ ಭೂ ವಂದನಂ ಕೃತಿ ಇದೆ. ಇಲ್ಲಿಯ ವಿಚಾರಗಳನ್ನು ಖ್ಯಾತ ಮಕ್ಕಳ ಸಾಹಿತಿ -ಚಿಂತಕ ಡಾ. ಜೆ.ಪಿ. ರಾಜರತ್ನಂ ಅವರು ಸರಳೀಕರಣಗೊಳಿಸಿದ್ದು, ಕನ್ನಡಿಗರೆಲ್ಲರೂ ಯಾವುದೇ ತೊಂದರೆ ಇಲ್ಲದೇ ಓದಲು ಸಾಧ್ಯವಾಗುವಂತೆ ಮಾಡಿದ್ದಾರೆ. ಡಿವಿಜಿ ಅವರ ಮೂಲ ವಿಚಾರಗಳಿಗೆ ಅವರು ಅರ್ಥ ನೀಡಿದ್ದು, ಮೂಲ ಅರ್ಥಕ್ಕೆ-ಭಾವಕ್ಕೆ ಭಂಗವಿರದಷ್ಟು ಎಚ್ಚರಿಕೆ ವಹಿಸಿದ್ದಾರೆ. .
ಮಂಕುತಿಮ್ಮನ ಕಗ್ಗ ಕಾವ್ಯದಿಂದ ಲೋಕವಿಖ್ಯಾತರಾದ ಡಿವಿಜಿ ಅವರು (ದೇವನಹಳ್ಳಿ ವೆಂಕಟರಮಣಯ್ಯ ಗುಂಡಪ್ಪ) ಲೇಖಕ- ಪತ್ರಕರ್ತ. ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ 1887ರ ಮಾರ್ಚ್ 17ರಂದು ಜನಿಸಿದ ಗುಂಡಪ್ಪ ಅವರು ಪ್ರೌಢಾಶಾಲಾ ಶಿಕ್ಷಣವನ್ನು ಮೈಸೂರು ಮಹಾರಾಜ ಪ್ರೌಢಶಾಲೆಯಲ್ಲಿ ಪಡೆದರು. ಮೆಟ್ರಿಕ್ ಪರೀಕ್ಷೆಯಲ್ಲಿ ಉತ್ತೀರ್ಣರಾಗದಿದ್ದರೂ ಸ್ವಂತ ಅಧ್ಯಯನದಿಂದ ಕನ್ನಡ, ಸಂಸ್ಕೃತ, ಇಂಗ್ಲಿಷ್ ಭಾಷೆಗಳಲ್ಲಿ ಪರಿಣತರಾಗಿದ್ದರು. ಮುಳುಬಾಗಿಲಿನ ಒಂದು ಶಾಲೆಯಲ್ಲಿ ಕೆಲವು ಕಾಲ ಬದಲಿ ಅಧ್ಯಾಪಕರಾಗಿ ಕಾರ್ಯ ನಿರ್ವಹಿಸಿದರು. ಅನಂತರ ಕೋಲಾರದ ಸೋಡಾ ಫ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡಿ ಬೇಸತ್ತು ಬೆಂಗಳೂರಿನಲ್ಲಿ ಜಟಕಾಬಂಡಿಗೆ ಬಣ್ಣ ಬಳಿಯುವ ಕಾರ್ಖಾನೆಯಲ್ಲಿ ಕೆಲಕಾಲ ಕೆಲಸ ಮಾಡಿದರು. ಅನಂತರ ಪತ್ರಿಕಾರಂಗ ...
READ MORE