’ವೇದ ಮತ್ತು ಉಪನಿಷತ್ತು’ಗಳಿಂದ ಆರಂಭವಾಗಿ ‘ಶೈವ ಮತ್ತು ಶಾಕ್ತ ಸಂಪ್ರದಾಯಗಳು’ ತನಕ ವಿವಿಧ ದಾರ್ಶನಿಕರ ವಿಶ್ಲೇಷಣೆಗಳನ್ನು ಕೃತಿಯಲ್ಲಿ ನೀಡಲಾಗಿದೆ.ಈಗಾಗಲೇ ಒಪ್ಪಿತವಾಗಿರುವ ಹಲವು ವಿವರಗಳನ್ನು ವಿಶ್ಲೇಷಿಸಿ, ಅವುಗಳನ್ನು ಮೌಲ್ಯಮಾಪನ ಮಾಡಿರುವುದು ಕೃತಿಯ ಹೆಚ್ಚುಗಾರಿಕೆ. ಸ್ಥಾಪಿತ ವೈದಿಕ ಮೌಲ್ಯಗಳನ್ನು ವಿರೋಧಿಸಿ ಎರಡು ಸಾವಿರ ವರ್ಷಗಳ ಹಿಂದೆ ಭಗವಾನ್ ಮಹಾವೀರ ಮತ್ತು ಭಗವಾನ್ ಬುದ್ಧರು ಹೊಸ ವಿಚಾರಧಾರೆಯನ್ನು ಪ್ರಾರಂಭಿಸಿದ ಕುರಿತ ವಿವರಗಳನ್ನು ಇಲ್ಲಿ ನೀಡಿದ್ಧಾರೆ.
ಪ್ರಸ್ತುತ ಯಡಿಯೂರು ಗದಗ ಡಂಬಳ್ ಮಠದ ಪೀಠಾಧಿಪತಿಯಾಗಿರುವ ಜಗದ್ಗುರು ಶ್ರೀ ಸಿದ್ಧರಾಮ ಸ್ವಾಮೀಜಿ ಬಾಗಲಕೋಟೆ ಜಿಲ್ಲೆಯ ಬೀಳಗಿ ಪಟ್ಟಣದಲ್ಲಿ ಡಿಸೆಂಬರ್ 12, 1958ರಲ್ಲಿ ಜಂಗಮ ಸಮಾಜದ ತಂದೆ ರುದ್ರಯ್ಯ, ತಾಯಿ ಶಾಂತಮ್ಮಳ ಉದರದಲ್ಲಿ ಜನಿಸಿದ ಬಾಲಕ ಗುರುಪಾದಯ್ಯ. ಮುಂದೆ ಬಿಳಗಿಯ ಕಲ್ಮಠದ ಶಾಖಾ ಮಠಕ್ಕೆ ಪೀಠಾಧಿಪತಿಯಾಗಿ ನೇಮಕಗೊಂಡರು. ಅದಾದ ಬಳಿಕ ಬನಾರಸ್ ವಿವಿಯಲ್ಲಿ ಎಂಎ ಹಿಂದಿ, ಸಂಸ್ಕೃತ ಹಾಗೂ ತತ್ವಶಾಸ್ತ್ರ ಉನ್ನತ ವ್ಯಾಸಂಗ ಪಡೆದುಕೊಂಡರು. ಬೆಳಗಾವಿಯ ನಾಗನೂರು ರುದ್ರಾಕ್ಷಿ ಮಠಕ್ಕೆ 1994ರಲ್ಲಿ ಪೀಠಾಧಿಪತಿಯಾಗಿ ನೇಮಕಗೊಂಡರು. ಲಿಂಗೈಕ್ಯ ಶಿವಬಸವ ಮಹಾಸ್ವಾಮಿಗಳ ಉತ್ತರಾಧಿಕಾರಿಯಾಗಿ ಇಡೀ ಮಠದ ಜವಾಬ್ದಾರಿಯನ್ನು ವಹಿಸಿಕೊಂಡು ಹಿಂದಿನ ಮಠಾಧೀಶರ ...
READ MORE