ಭಾವರಾಗ ಮಂಜರಿ

Author : ದ.ರಾ. ಬೇಂದ್ರೆ (ಅಂಬಿಕಾತನಯದತ್ತ)

Pages 270

₹ 120.00




Year of Publication: 2006
Published by: ದ.ರಾ. ಬೇಂದ್ರೆ ಸಂಶೋಧನ ಸಂಸ್ಥೆ, ಹುಬ್ಬಳ್ಳಿ

Synopsys

ಬೇಂದ್ರೆಯವರ ಕವಿತೆಗಳು ಶಾಸ್ತ್ರೀಯ ಸಂಗೀತದ ಚೀಜು ಮಾಡಿ ಪ್ರಕಟಿಸಲಾದ ಸಂಕಲನ ’ಭಾವರಾಗ ಮಂಜರಿ’. ಗಾಯಕರಿಗೆ ಉಪಯುಕ್ತವಾಗುವ ಮಾದರಿಯಲ್ಲಿ ಸಿದ್ಧಪಡಿಸಲಾಗಿರುವ ಗ್ರಂಥವಿದು. ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಬಗ್ಗೆ ಬೇಂದ್ರೆಯವರಿಗೆ ವಿಶೇಷ ಆಸಕ್ತಿ. ಗೇಯ ಗೀತೆಗಳನ್ನು ಬರೆದಿರುವ ಬೇಂದ್ರೆಯವರು ಅದಕ್ಕಾಗಿ ಸಂಗೀತದಲ್ಲಿಯೂ ಆಸಕ್ತರಾಗಿದ್ದರು. ಈ ಪುಸ್ತಕವು ಬೇಂದ್ರೆಯವರ ಕವಿತೆಗಳಲ್ಲಿ ಅಡಕವಾಗಿರುವ ಸಂಗೀತದ ಗುಣವನ್ನು ಅನಾವರಣ ಮಾಡುತ್ತದೆ.

About the Author

ದ.ರಾ. ಬೇಂದ್ರೆ (ಅಂಬಿಕಾತನಯದತ್ತ)
(31 January 1896 - 26 October 1981)

ಕನ್ನಡ ಕಾವ್ಯದ ಸೊಬಗು-ಸೊಗಸು ಹೆಚ್ಚಿಸಿದ ‘ಅಂಬಿಕಾತನಯದತ್ತ’ ಕಾವ್ಯನಾಮದ ದತ್ತಾತ್ರೇಯ ರಾಮಚಂದ್ರ ಬೇಂದ್ರೆ ಅವರನ್ನು ‘ವರಕವಿ’, ‘ಗಾರುಡಿಗ’ ಎಂದು ಗುರುತಿಸಲಾಗುತ್ತದೆ. ತಂದೆ ರಾಮಚಂದ್ರ ತಾಯಿ ಅಂಬವ್ವ. ಧಾರವಾಡದಲ್ಲಿ 1896ರ ಜನವರಿ 31ರಂದು ಜನಿಸಿದರು. ಧಾರವಾಡದಲ್ಲಿ ಮೆಟ್ರಿಕ್ (1913) ಮುಗಿಸಿದ ಮೇಲೆ ಪುಣೆಯ ಫರ್ಗ್ಯುಸನ್ ಕಾಲೇಜಿನಲ್ಲಿ ವ್ಯಾಸಂಗ ಮಾಡಿ ಬಿ.ಎ. (1918) ಪದವಿ ಪಡೆದರು. ಕೆಲವು ಕಾಲ ಅಧ್ಯಾಪಕ ವೃತ್ತಿ ಮಾಡಿದ ಮೇಲೆ ಮುಂಬಯಿ ವಿಶ್ವವಿದ್ಯಾನಿಲಯದಿಂದ ಎಂ.ಎ. (1935) ಪದವಿ ಪೂರ್ಣಗೊಳಿಸಿದರು. ಗದುಗಿನ ವಿದ್ಯಾದಾನ ಸಮಿತಿ ಪ್ರೌಢಶಾಲೆಯಲ್ಲಿ ಹೆಡ್ ಮಾಸ್ಟರ್ ಆಗಿ ವೃತ್ತಿ ಆರಂಭಿಸಿದ ಅವರು ನಂತರ ಹುಬ್ಬಳ್ಳಿಯ ನ್ಯೂ ...

READ MORE

Related Books