‘ಭುವನದ ಭಾಗ್ಯ’ದ ಒಂದು ಗಣ್ಯಭಾಗವೇ ಆಗಿರುವ ಅಂಬಿಕಾತನಯದತ್ತ ಬೇಂದ್ರೆ ಅವರ ಕಾವ್ಯಾದಿ ಸಾಹಿತ್ಯ ಕೃತಿಗಳನ್ನು ಅಮೂಲಾಗ್ರವಾಗಿ, ಕೂಲಂಕಷವಾಗಿ ಎನ್ನುವಷ್ಟು ಸಮಗ್ರವಾಗಿ ವಿವೇಚಿಸಿ, ಡಾ.ಜಿ.ಎಸ್.ಅಮೂರ ಅವರು ರಚಿಸಿರುವ ಸಹೃದಯ ವಿಮರ್ಶಕ ಕೃತಿ.
ಬೇಂದ್ರೆಯವರ ಸಾಹಿತ್ಯದ ಮೇಲೆ ಅಲ್ಲಿ ಇಲ್ಲಿ ಕೆಲವು ಲೇಖನಗಳು, ಅವರ ಕಾವ್ಯದ ಮೇಲೆ ಒಂದೆರಡು ಗ್ರಂಥಗಳು ಬಂದಿದ್ದರೂ ಸಮಗ್ರವಾಗಿ ಅವರ ಸಾಹಿತ್ಯದ ಮೇಲೆ ಬೆಳಕು ಚೆಲ್ಲುವ, ಅವರ ಸಾಹಿತ್ಯದ ಮೇಲೆ ಬಂದಿರುವ ಎಲ್ಲ ವಿಮರ್ಶೆಗಳನ್ನೂ ಗಮನಿಸಿ, ತಮ್ಮ ಕೃತಿಗಳ ಮೇಲೆ ಬೇಂದ್ರೆಯವರೇ ಹೇಳಿರುವ ಮಾತುಗಳನ್ನೆಲ್ಲ ಸಂಗ್ರಹಿಸಿ, ಸಮೀಕ್ಷೆ ನಡೆಸಿ, ಬೇಂದ್ರೆಯವರೇ ಯಾವ ಯಾವ ಕೃತಿಗಳಿಂದ, ಸಾಹಿತಿಗಳಿಂದ ಪ್ರಭಾವಿತರಾದರು, ಆ ಪ್ರಭಾವಗಳನ್ನೆಲ್ಲ ಮೀರಿ ನಿಂತು ಅವರು ಪ್ರಭಾವಿತರಾದರು ಆ ಪ್ರಭಾವಗಳೆನ್ನೆಲ್ಲ ಮೀರಿ ನಿಂತು ಅವರ ಕೃತಿಗಳು ಹೇಗೆ ಸ್ವತಂತ್ರ ಕೃತಿಗಳಾಗಿ ಕನ್ನಡ ಕಾವ್ಯ ಸಂಪ್ರದಾಯದಲ್ಲೇ ಅನನ್ಯವಾಗಿದೆ ಎಂಬುದನ್ನು ಇಲ್ಲಿ ಸವಿಸ್ತಾರವಾಗಿ ಚಿತ್ರಿಸಿ, ಅಮೂರರು ಬೇಂದ್ರೆಯವರ ಸಾಹಿತ್ಯದ ಆಳವಾದ ಅಭ್ಯಾಸಕ್ಕೆ ಸಹಕಾರಿಯಾಗುವಂತೆ ಈ ಕೃತಿಯನ್ನು ರಚಿಸಿದ್ದಾರೆ.
ಕನ್ನಡ ಸಾಹಿತ್ಯವನ್ನು ಇಂಗ್ಲಿಷ್ ಮೂಲಕ ಇತರ ಭಾಷಾ ಜಗತ್ತಿಗೆ ಪರಿಚಯಿಸುತ್ತಾ, ವಿಮರ್ಶಾಲೋಕದಲ್ಲಿ ಕನ್ನಡ-ಇಂಗ್ಲಿಷ್ ಕೃತಿಗಳನ್ನು ವಿಮರ್ಶಿಸುತ್ತಾ, ಮಹತ್ತರ ಪಾತ್ರ ವಹಿಸುತ್ತಾ ಬಂದಿರುವ ಗುರುರಾಜ ಶಾಮಾಚಾರ್ಯ ಆಮೂರರು ಹುಟ್ಟಿದ್ದು ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಬೊಮ್ಮನಹಳ್ಳಿಯಲ್ಲಿ. ತಂದೆ ಶಾಮಾಚಾರ್ಯರು, ತಾಯಿ ಗಂಗಾದೇವಿ. ತಂದೆಗೆ ಸಂಗೀತ, ಸಾಹಿತ್ಯದಲ್ಲಿ ಆಸಕ್ತಿ. ಪ್ರಾರಂಭಿಕ ಶಿಕ್ಷಣ ಸೂರಣಗಿಯಲ್ಲಿ (ಈಗ ಶಿರಹಟ್ಟಿ ತಾಲ್ಲೂಕು, ಗದಗ ಜಿಲ್ಲಾ) ಹೈಸ್ಕೂಲು ವಿದ್ಯಾಭ್ಯಾಸ ಹಾವೇರಿಯಲ್ಲಿ. ಶಿಕ್ಷಕರಾಗಿ ದೊರೆತ ಹುಚ್ಚೂರಾವ್ ಬೆಂಗೇರಿ ಮಾಸ್ತರು ಕನ್ನಡದಲ್ಲಿ ಆಸಕ್ತಿ ಬೆಳೆಯುವಂತೆ ಮೂಡಿದರೆ, ಎಸ್.ಜಿ. ಗುತ್ತಲ ಮಾಸ್ತರು ಇಂಗ್ಲಿಷ್ ಸಾಹಿತ್ಯದ ಬಗ್ಗೆ ಆಸಕ್ತಿ ಮೂಡುವಂತೆ ಮಾಡಿದರು. ಧಾರವಾಡದ ...
READ MORE