ಖ್ಯಾತ ಲೇಖಕಿ, ನಾಡೋಜ ಡಾ. ಸಾರಾ ಅಬೂಬಕ್ಕರ್ ಅವರ ಬಾನುಲಿ ನಾಟಕಗಳು. ಸಾಮಾಜಿಕ ಹೊಣೆಗಾರಿಕೆಯನ್ನು ಎಚ್ಚರಿಸುವುದು ಪ್ರತಿ ನಾಟಕದ ವಸ್ತು. ಪರಿಣಾಮಕಾರಿ ಸಂಭಾಷಣೆ, ಪಾತ್ರಗಳ ಸೃಷ್ಟಿ, ಸನ್ನಿವೇಶಗಳ ಜೋಡಣೆ ಇತ್ಯಾದಿ ಸಾಹಿತ್ಯಕ ಅಂಶಗಳಿಂದ ನಾಟಕಗಳು ಓದುಗರ ಹಾಗೂ ಪ್ರೇಕ್ಷಕರ ಗಮನ ಸೆಳೆಯುತ್ತವೆ.
ಕನ್ನಡದ ಪ್ರಖ್ಯಾತ ಲೇಖಕಿ ಸಾರಾ ಅಬೂಬಕ್ಕರ್ ಅವರು 1936ರ ಜೂನ್ 30ರಂದು ಕಾಸರಗೋಡಿನ ಚಂದ್ರಗಿರಿ ತೀರದ ಗ್ರಾಮವೊಂದರಲ್ಲಿ ಜನಿಸಿದರು. ತಂದೆ ನ್ಯಾಯವಾದಿಗಳಾಗಿದ್ದ ಪಿ. ಅಹಮದ್ ಅವರು ಮತ್ತು ತಾಯಿ ಚೈನಾಬಿ ಅವರು. ಸಾರಾ ಅವರ ಪ್ರಾಥಮಿಕ ವಿದ್ಯಾಭ್ಯಾಸ ಅವರ ಹುಟ್ಟಿದೂರಿನಲ್ಲೇ ನೆರವೇರಿತು. ಮುಂದೆ ಅವರು ಹೈಸ್ಕೂಲುವರೆಗೆ ಕಲಿತದ್ದು ಕಾಸರಗೋಡಿನಲ್ಲಿ. ಎಂಜನಿಯರ್ ಆಗಿದ್ದ ಅಬೂಬಕ್ಕರ್ ಅವರೊಡನೆ ಸಾರಾ ಅವರ ವಿವಾಹ ಏರ್ಪಟ್ಟು ವಿದ್ಯಾಭ್ಯಾಸಕ್ಕೆ ವಿದಾಯ ಹೇಳುವಂತಾಯಿತು. ಆದರೆ ಓದಿನಲ್ಲಿ ನಿರಂತರ ಆಸಕ್ತರಾಗಿದ್ದ ಸಾರಾ ಅವರು ಶಿವರಾಮ ಕಾರಂತರು, ಇನಾಂದಾರ್, ಭೈರಪ್ಪ, ಅನಂತಮೂರ್ತಿ ಇವರೆಲ್ಲರ ಬರವಣಿಗೆಗೆ ಮಾರು ಹೋಗಿ ಸದಾ ...
READ MORE