ಪತ್ರಕರ್ತ, ಲೇಖನ, ಚಿಂತಕ ಪಿ. ಲಂಕೇಶ್ ಅವರ ಲೇಖನ ಸಂಕಲನ. ಕೃತಿಯಲ್ಲಿ ನಮ್ಮ ಸಂಕಲ್ಪ, ನಮ್ಮೆಲ್ಲರ ಕನಸಿನ ನಾಡು, ನಮ್ಮ ಸ್ಕೂಲಲ್ಲಿ ನಾವು ಬೆಳೆದ ರಸಬಾಳೆ, ಕುಣಿಯೋಣು ಬಾರಾ, ಕುಣಿಯೋಣು ಬಾ, ವಿದ್ಯೆಯ ಜಾಗದಲ್ಲಿ ನೆನಪುಗಳು, ನನ್ನ ಸುತ್ತಣ ಮೂರು ದೃಶ್ಯಗಳು, ಹೆಂಡ ಎರಡು ಬಗೆಯ ಉಪಟಳ, ಸೇರಿದಂತೆ ಹಲವು ವಿಚಾರಗಳ ಕುರಿತಾಗಿ ಲಂಕೇಶರು ಬರೆದ ವೈಚಾರಿಕ ಲೇಖನಗಳಿವೆ.
ಪಿ. ಲಂಕೇಶ್ ಕನ್ನಡ ಸಾಹಿತ್ಯದ ಪ್ರಮುಖ ಲೇಖಕರಲ್ಲಿ ಒಬ್ಬರು. ಪತ್ರಕರ್ತ-ಸಾಹಿತಿಯಾಗಿ ಜನಪ್ರಿಯರಾಗಿರುವ ಪಾಳ್ಯದ ಲಂಕೇಶ್ ಅವರ ಬದುಕು-ಬರಹ ವೈವಿಧ್ಯದಿಂದ ಕೂಡಿವೆ. ಕವಿ, ಕಥೆಗಾರ, ಕಾದಂಬರಿಕಾರ, ಅನುವಾದಕ, ನಾಟಕಕಾರ, ನಟ, ಚಲನಚಿತ್ರ ನಿರ್ದೇಶಕ, ಸಂಪಾದಕ, ಕೃಷಿಕ ಹೀಗೆ ಅವರ ಪ್ರತಿಭೆಗೆ ಹಲವು ಮುಖ. ಕೆಲಸ ಮಾಡಿದ ಕ್ಷೇತ್ರದಲ್ಲೆಲ್ಲ ತನ್ನದೇ ಛಾಪು ಮೂಡಿಸಿದವರು ಲಂಕೇಶ್. ಶಿವಮೊಗ್ಗ ಜಿಲ್ಲೆಯ ಹೊನ್ನಾಳಿ ತಾಲೂಕಿನ ಕೊನಗವಳ್ಳಿ 1935ರ ಮಾರ್ಚ್ 8ರಂದು ಜನಿಸಿದರು., ತಂದೆ ನಂದಿ ಬಸಪ್ಪ, ತಾಯಿ ದೇವೀರಮ್ಮ. ಕೊನಗವಳ್ಳಿ ಮತ್ತು ಹಾರನಹಳ್ಳಿಯಲ್ಲಿ ಪ್ರಾಥಮಿಕ, ಮಾಧ್ಯಮಿಕ ವಿದ್ಯಾಭ್ಯಾಸ ಮಾಡಿದ ಅವರು ಪ್ರೌಢಶಾಲೆ ಮತ್ತು ಇಂಟರ್ ...
READ MORE