'ಬಿಟ್ಟು ಹೋದ ಪುಟಗಳು ಸಂಗ್ರಹ-3' ಲೇಖಕ, ಚಿಂತಕ, ಪತ್ರಕರ್ತ ಪಿ.ಲಂಕೇಶ್ ಅವರ ಲೇಖನಗಳ ಸಂಕಲನ. ಈ ಕೃತಿಯಲ್ಲಿ ಬದುಕೊಂದು ಮಯೂರ ನೃತ್ಯ, ಕಾಂಗ್ರೆಸ್ ಎಂಬ ಅಪಾರ ನೆನಪುಗಳ ಪಕ್ಷ, ಎಲ್ಲರಂತಲ್ಲದ ಒಬ್ಬ ಸ್ವಾಮಿಯ ನಿಧನ, ಸಾವಿನೊಂದಿಗೆ ಸರಸ, ಮನುಷ್ಯನ ಮಾಂತ್ರಿಕ ಕೈರೂಪಿಸಿದ ವ್ಯಂಗ್ಯಚಿತ್ರ ಸೇರಿದಂತೆ ಹಲವಾರು ಮಹತ್ವದ ಲೇಖನಗಳಿವೆ.
ಪಿ. ಲಂಕೇಶ್ ಕನ್ನಡ ಸಾಹಿತ್ಯದ ಪ್ರಮುಖ ಲೇಖಕರಲ್ಲಿ ಒಬ್ಬರು. ಪತ್ರಕರ್ತ-ಸಾಹಿತಿಯಾಗಿ ಜನಪ್ರಿಯರಾಗಿರುವ ಪಾಳ್ಯದ ಲಂಕೇಶ್ ಅವರ ಬದುಕು-ಬರಹ ವೈವಿಧ್ಯದಿಂದ ಕೂಡಿವೆ. ಕವಿ, ಕಥೆಗಾರ, ಕಾದಂಬರಿಕಾರ, ಅನುವಾದಕ, ನಾಟಕಕಾರ, ನಟ, ಚಲನಚಿತ್ರ ನಿರ್ದೇಶಕ, ಸಂಪಾದಕ, ಕೃಷಿಕ ಹೀಗೆ ಅವರ ಪ್ರತಿಭೆಗೆ ಹಲವು ಮುಖ. ಕೆಲಸ ಮಾಡಿದ ಕ್ಷೇತ್ರದಲ್ಲೆಲ್ಲ ತನ್ನದೇ ಛಾಪು ಮೂಡಿಸಿದವರು ಲಂಕೇಶ್. ಶಿವಮೊಗ್ಗ ಜಿಲ್ಲೆಯ ಹೊನ್ನಾಳಿ ತಾಲೂಕಿನ ಕೊನಗವಳ್ಳಿ 1935ರ ಮಾರ್ಚ್ 8ರಂದು ಜನಿಸಿದರು., ತಂದೆ ನಂದಿ ಬಸಪ್ಪ, ತಾಯಿ ದೇವೀರಮ್ಮ. ಕೊನಗವಳ್ಳಿ ಮತ್ತು ಹಾರನಹಳ್ಳಿಯಲ್ಲಿ ಪ್ರಾಥಮಿಕ, ಮಾಧ್ಯಮಿಕ ವಿದ್ಯಾಭ್ಯಾಸ ಮಾಡಿದ ಅವರು ಪ್ರೌಢಶಾಲೆ ಮತ್ತು ಇಂಟರ್ ...
READ MORE