ಕಾದಂಬರಿಕಾರ ಡಾ. ಬಿ. ಪ್ರಭಾಕರ ಶಿಶಿಲ ಅವರ ಆತ್ಮಕಥೆ- ಬೊಗಸೆ ತುಂಬಾ ಕನಸು. ಐತಿಹಾಸಿಕ ಕಾದಂಬರಿಗಳನ್ನು ವಿಶೇಷವಾಗಿ ಕೊಡಗಿನ ಹಾಲೇರಿ ರಾಜವಂಶೀಯರ ಐತಿಹಾಸಿಕ ಘಟನಾವಳಿಗಳ ಮೂಲಕ ಕಾದಂಬರಿ ರಚಿಸಿ ತಮ್ಮ ಪ್ರದೇಶ ಇತಿಹಾಸದ ಪ್ರಜ್ಞೆ ಜಾಗೃತಗೊಳಿಸಿದ ಲೇಖಕರು ತಮ್ಮ ಬದುಕಿನ ಸಾಧನೆ-ಸಾಹಸಗಳನ್ನು ದಾಖಲಿಸಿದ ಆತ್ಮಕಥೆ ಇದು.
ಲೇಖಕ ಡಾ. ಪ್ರಭಾಕರ ಶಿಶಿಲ ಅವರು ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸಿ ನಿವೃತ್ತರಾಗಿದ್ದಾರೆ. ಸಾಹಿತ್ಯದತ್ತ ಹೆಚ್ಚಿನ ಆಸಕ್ತಿ ಹೊಂದಿರುವ ಅವರು ಹಲವು ಕೃತಿಗಳನ್ನು ರಚಿಸಿದ್ದಾರೆ. ಜೊತೆಗೆ ಅರ್ಥಶಾಸ್ತ್ರದ ಪಠ್ಯಪುಸ್ತಕಗಳನ್ನು ರಚಿಸಿದ್ದಾರೆ. ಕೃತಿಗಳು: ಮತ್ಸ್ಯಗಂಧಿ, ಗಗ್ಗರ, ಬಾರಣೆ, ಗುಜರಿ ಅದ್ದಿಲಿಚ್ಚನ ಜಿಹಾದಿಯ, ಕೊಡಗಿನ ಐತಿಹ್ಯ ಕಥೆಗಳು, ಬೆಟ್ಟದಾ ಮೇಲೊಂದು, ಕಪಿಲಳ್ಳಿಯ ಕತೆಗಳು, ಜಲಲ ಜಲಧಾರೆ, ದೊಡ್ಡ ವೀರ ರಾಜೇಂದ್ರ, ಕೊಡಗಿನ ಕತೆಗಳು. ಶಿಶಿಲರನ್ನೇ ಕುರಿತು ಅನೇಕ ಗ್ರಂಥಗಳು ಪ್ರಕಟವಾಗಿವೆ . ಸುವರ್ಣ ಅಭಿನಂದನಾ ಸ್ಮರಣಿಕೆ, ಸಾಹಿತ್ಯ ಶಿಶಿಲ: ಶಿಶಿಲರ ಸಮಗ್ರ ಸಾಹಿತ್ಯ ವಿಮರ್ಶೆ, ಶಿಶಿಲರ ಜೀವನ ಮತ್ತು ಸಾಧನೆಗಳು, ಪ್ರಭಾಕರ ಶಿಶಿಲರ ಸಾಹಿತ್ಯ ಕುರಿತು ಡಾ. ಮೋಹನ ಕುಮಾರ ...
READ MOREಕರ್ನಾಟಕ ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ 2019