ಬೋರಿಸ್ ಪಾಸ್ತರ್‌ನಾಕ್ ರಷ್ಯಾದ ಪ್ರಮುಖ ಕವಿ. ಪ್ರಮುಖ ಅನುವಾದಕರಾದ ಬೋರಿಸ್ ಪಾಸ್ತರ್‌ನಾಕ್ ಷೇಕ್ಸ್‌ಪಿಯರ್ , ಗೊಯಟೆ ಅವರ ನಾಟಕಗಳನ್ನು ಅನುವಾದ ಮಾಡಿದ್ದಾರೆ. ಈತನಿಗೆ ಪ್ರಮುಖ ಪ್ರಶಸ್ತಿಯಾದ ನೋಬೆಲ್ ಪ್ರಶಸ್ತಿಯು ಲಭಿಸಿತು. ಈ ಸಂದರ್ಭದಲ್ಲಿ ಹಲವು ಸಮಸ್ಯೆಗಳನ್ನು ಎದುರಿಸಬೇಕಾಯಿತು. ಕೇಶವ ಮಳಗಿ ಯವರು ಬೋರಿಸ್ ಪಾಸ್ತರ್‌ನಾಕ್ ಅವರ ಹಲವು ಕಾದಂಬರಿ , ಕವಿತೆಗಳನ್ನು ಅನುವಾದ ಮಾಡಿ ಈ ಕೃತಿಯ ಮೂಲಕ ಓದುಗರಿಗೆ ತಲುಪಿಸಿದ್ದಾರೆ.
ಸದ್ಯ ಬೆಂಗಳೂರಿನ ಸೃಷ್ಟಿ ಇನ್ಸ್ಟಿಟ್ಯೂಟ್ ಆಫ್ ಆರ್ಟ್, ಡಿಸೈನ್ ಆ್ಯಂಡ್ ಟೆಕ್ನಾಲಜಿಯಲ್ಲಿ ಬೋಧಕರಾಗಿರಾಗಿರುವ ಕೇಶವ ಮಳಗಿ ಅವರು ಮೂಲತಃ ಬಳ್ಳಾರಿ ಜಿಲ್ಲೆಯವರು. ಕನ್ನಡದ ಪ್ರಮುಖ ಕಥೆಗಾರರಲ್ಲಿ ಒಬ್ಬರಾಗಿರುವ ಮಳಗಿ ಅವರು 80ರ ದಶಕದಲ್ಲಿ ತಮ್ಮ ಬರವಣಿಗೆ ಆರಂಭಿಸಿದರು. ತಮ್ಮ ವಿಶಿಷ್ಟ ನುಡಿಗಟ್ಟು, ಶೈಲಿ, ದನಿ ಬನಿಯ ಕತೆಗಳಿಂದ ಕನ್ನಡ ಓದುಗರಿಗೆ ಚಿರಪರಿಚಿತ ಇರುವ ಮಳಗಿ ಅವರು ಜನಸಾಮಾನ್ಯರು ಬದುಕನ್ನು ಘನತೆ, ಪ್ರೀತಿಯಿಂದ ಜೀವಿಸುವ ರೀತಿಯನ್ನು ಕತೆಗಳಲ್ಲಿ ಚಿತ್ರಿಸುತ್ತಾರೆ. ಆಪ್ತವಾಗಿ ಕತೆ ಹೇಳುವಂತೆ ಬರೆಯುವ ಮಳಗಿ ಅವರ 'ಕಡಲ ತೆರೆಗೆ ದಂಡೆ', 'ಮಾಗಿ ಮೂವತ್ತೈದು', 'ವೆನ್ನೆಲ ದೊರೆಸಾನಿ', 'ಹೊಳೆ ...
READ MORE