ಗಾಯಕ ಸಿ.ಅಶ್ವತ್ಥ್ ಅವರ ಜೀವನಗಾಥೆಯ ಪುಸ್ತಕವಿದು. ಲೇಖಕ ಬಿ.ಆರ್. ಲಕ್ಷಣರಾವ್ ಅವರು ರಚಿಸಿದ್ದಾರೆ. ಈ ಕೃತಿಯಲ್ಲಿ ಸಿ.ಅಶ್ವತ್ಥ್ ಅವರ ಜೀವನದ ಏಳು-ಬೀಳುಗಳು, ಬಾಲ್ಯ ಜೀವನ, ಸಂಗೀತ ಲೋಕದ ಪಯಣ, ಅನಿರೀಕ್ಷಿತ ತಿರುವುಗಳು, ಹೀಗೆ ಹಲವಾರು ಅಯಾಮಗಳ ಕುರಿತು ಈ ಪುಸ್ತಕದಲ್ಲಿ ಸರಳಕನ್ನಡದಲ್ಲಿ ವಿವರಿಸಿದ್ದಾರೆ.
ಕವಿ, ಕತೆಗಾರ, ವಿಮರ್ಶಕ ಹಾಗೂ ಚಲನಚಿತ್ರಕಾರ ಬಿ.ಆರ್. ಲಕ್ಷ್ಮಣರಾವ್ ಅವರು 1946 ಸೆಪ್ಟೆಂಬರ್ 9ರಂದು ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಗಟ್ಟ ತಾಲ್ಲೂಕಿನ ಚೀಮಂಗಲದಲ್ಲಿ ಜನಿಸಿದರು. ತಂದೆ ರಾಜಾರಾವ್. ತಾಯಿ ವೆಂಕಟಲಕ್ಷ್ಮಮ್ಮ. ಚಿಂತಾಮಣಿಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ಇವರು ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಪದವಿ ಹಾಗೂ ಮೈಸೂರು ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದರು. ಚಿಂತಾಮಣಿಯ ಪ್ರೌಢಶಾಲೆ ಉಪಾಧ್ಯಾಯರಾಗಿ ವೃತ್ತಿ ಆರಂಭಿಸಿದ ಇವರು ವಿನಾಯಕ ಟುಟೋರಿಯಲ್ಸ್‌ನ ಪ್ರಿನ್ಸಿಪಾಲರಾಗಿ ಕಾರ್ಯನಿರ್ವಹಿಸಿ ಪ್ರಸ್ತುತ ಸಂಪೂರ್ಣವಾಗಿ ಸಾಹಿತ್ಯ ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಇವರು ಬರೆದ ಪ್ರಮುಖ ಕೃತಿಗಳೆಂದರೆ ಲಿಲ್ಲಿ ಪುಟ್ಟಿಯ ಹಂಬಲ, ಶಾಂಗ್ರಿ-ಲಾ, ಅಪರಾಧಂಗಳ ಮನ್ನಿಸೊ, ಗೋಪಿ ಮತ್ತು ...
READ MORE