ಲೇಖಕ ಸು. ರುದ್ರಮೂರ್ತಿ ಶಾಸ್ತ್ರಿ ಅವರು ಬರೆದ ಕೃತಿ-ಚಾಣಕ್ಯ. ಮೌರ್ಯರ ಸಾಮ್ರಾಜ್ಯ ಸ್ಥಾಪನೆಯಲ್ಲಿ ಪ್ರಧಾನ ಪಾತ್ರವಹಿಸಿದ್ದ ಚಾಣಕ್ಯ ಕೇವಲ ರಾಜನೀತಿಜ್ಞ ಮಾತ್ರವಲ್ಲ; ವಿಶೇಷ ಆರ್ಥಿಕ ತಜ್ಞನೂ ಆಗಿದ್ದ. ಈತನ ಆರ್ಥಿಕ ನೀತಿಯು ವಿಶ್ವದ ಗಮನ ಸೆಳೆದಿದೆ. ಹತ್ತು ಹಲವು ಅಧ್ಯಯನಗಳು ನಡೆದು, ಅದರ ಪ್ರಸಕ್ತ ಮಹತ್ವವನ್ನು ಸಮರ್ಥಿಸಿವೆ. ಇಂತಹ ರಾಜನೀತಿಜ್ಞನ ದೂರದೃಷ್ಟಿ, ಶತ್ರುಗಳನ್ನು ಸದೆ ಬಡೆಯುವಲ್ಲಿ ಆತನ ಚಾಣಾಕ್ಷತೆ, ಆಡಳಿತ ಕುಶಲತೆ ಇತ್ಯಾದಿ ಪರಿಕಲ್ಪನೆಗಳನ್ನು ಬಿಂಬಿಸುವ ಉದ್ದೇಶದ ಐತಿಹಾಸಿಕ ಘಟನೆಗಳಾಧರಿತ ಕಾದಂಬರಿ ಇದು. ನಿರೂಪಣಾ ಶೈಲಿ, ಪಾತ್ರಗಳ ಸೃಷ್ಟಿ, ಪರಿಣಾಮಕಾರಿ ಸಂಭಾಷಣೆ, ಸನ್ನಿವೇಶಗಳ ಜೋಡಣೆ ಇತ್ಯಾದಿ ಸಾಹಿತ್ಯಕ ಅಂಶಗಳಿಂದ ಈ ಕಾದಂಬರಿಯು ಓದುಗರ ಗಮನ ಸೆಳೆಯುತ್ತದೆ.
ಲೇಖಕ ರುದ್ರಮೂರ್ತಿ ಶಾಸ್ತ್ರಿ ಅವರು ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸುಗ್ಗನಹಳ್ಳಿಯವರು. ತಂದೆ-ಎಸ್.ಎನ್. ಶಿವರುದ್ರಯ್ಯ, ತಾಯಿ- ಸಿದ್ಧಗಂಗಮ್ಮ. ಪ್ರಾರಂಭಿಕ ಶಿಕ್ಷಣ ಹುಟ್ಟೂರಿನಲ್ಲಿ , ಪ್ರೌಢಶಾಲೆಯನ್ನು ರಾಮನಗರದಲ್ಲಿ ಪೂರ್ಣಗೊಳಿಸಿದರು. ಬೆಂಗಳೂರು ವಿಶ್ವವಿದ್ಯಾಲಯದಿಂದ ಎಂ.ಎ ಪದವೀಧರರು. ಬೆಂಗಳೂರಿನ ರೇಣುಕಾಚಾರ್ಯ ಸಂಜೆ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕರಾಗಿದ್ದರು. ನಂತರ ವೃತ್ತಿಗೆ ರಾಜೀನಾಮೆ ನೀಡಿ ಸಾಹಿತ್ಯ ಸೇವೆಯಲ್ಲಿ ತೋಡಗಿ, ಹಲವಾರು ಕೃತಿಗಳನ್ನು ಪ್ರಕಟಿಸಿದ್ದಾರೆ. ‘ಭಾವ ಲಹರಿ’, ಪರಿ, ಅಂತರಂಗ-ಬಹಿರಂಗ, ಚಿತ್ರಕಲ್ಪನೆ, ರಾಗ, ನಾಡಗೀತೆಗಳು, ನಾದರೂಪಕ ಕವನ ಸಂಕಲನಗಳು. ಪ್ರಾಸ-ಪ್ರಯಾಸ, ಕೆಂಪಭಾರತಂ, ಕೆಂಪರಾಮಾಯಣಂ, ಕೆಂಪನ ವಚನಗಳು, ಅಲ್ಪಜ್ಞನ ವಚನಗಳು ಮುಂತಾದ ಹಾಸ್ಯ ಸಂಕಲನಗಳು ಸೇರಿ ಸುಮಾರು ...
READ MORE