‘ಚಾರುವಸಂತ’ ನಾಡೋಜ ಹಂಪ ನಾಗರಾಜಯ್ಯ ಅವರು ರಚಿಸಿರುವ ಕಾವ್ಯ ಕಥನ. ಗೌರವಾನ್ವಿತ ವೈಶ್ಯ ಮನೆತನದ ಚಾರುದತ್ತನು ಸುರ ಸುಂದರಿ ವೇಶ್ಯೆ ವಸಂತ ತಿಲಕೆಯಲ್ಲಿ ಅನುರಕ್ತನಾಗಿ ಮನೆತನದ ಕೀರ್ತಿ ಬೀದಿ ಪಾಲಾಗುವ ಹಾಗೆ ನಿರ್ಗತಿಕನಾಗುತ್ತಾನೆ. ಸಾಧ್ವಿ ಪತ್ನಿಯ ಹೃದಯ ವೈಶಾಲ್ಯದಿಂದಾಗಿ ವಸಂತತಿಲಕೆಯನ್ನು ಮಡದಿಯಾಗಿ ಸ್ವೀಕರಿಸುತ್ತಾನೆ. ಶ್ರಮ, ಸಾಹಸ, ನಿಷ್ಠೆಯಿಂದ ದೇಶ ವಿದೇಶ ಸಂಚರಿಸಿ ಮತ್ತೆ ವಣಿಕಶ್ರೇಷ್ಠನಾಗುತ್ತಾನೆ. ಶೃಂಗಾರ, ಸಾಹಸ, ತ್ಯಾಗ-ಭೋಗ ಸಮನ್ವಯ ಕೂಡಿ ಕಥೆಯ ಹಂದರ ದ್ಯಾವಾ-ಪೃಥವಿ ತಬ್ಬಿ ಮನೋಜ್ಞವಾಗಿದೆ. ಅನಿರೀಕ್ಷಿತ ತಿರುವುಗಳನ್ನು ಪಡೆಯುತ್ತಾ ಕಾವ್ಯ ಕುತೂಹಲ ಅರಳಿಸುತ್ತದೆ. ಇದು ರಾಜರಾಣಿ ಅರಮನೆ ಕುರಿತ ಕಾವ್ಯವಲ್ಲ. ಯುದ್ಧಮುಖಿ ಕಥನವೂ ಅಲ್ಲ. ಮನುಷ್ಯ ಸ್ವಭಾವದ ವಿನ್ಯಾಸದ ನಿರಿಗೆಗಳಲ್ಲಿ ಅನಾವರಣಗೊಳ್ಳುತ್ತಾ ಮತಾತೀತವಾಗಿ, ಮಹೋನ್ನತ ಮಾನವೀಯ ಮೌಲ್ಯಗಳಿಂದ ಕೂಡಿದ ಜನಮುಖಿ ಹಾಗೂ ಸಮಾಜಮುಖಿ ಚಿರಂತನ ಕಾವ್ಯ, ಅಮರ ಪ್ರೇಮದ ಆಖ್ಯಾನವನ್ನು ಆಡುಮಾತಿನ ಲಯದಲ್ಲಿ ಹಂಪನಾ ಹಿಡಿದಿಟ್ಟಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿದ್ದ ಹಂ.ಪ. ನಾಗರಾಜಯ್ಯ ಅವರು ಕನ್ನಡದ ಪ್ರಮುಖ ಭಾಷಾ ವಿಜ್ಞಾನಿ, ಸಂಶೋಧಕ. ’ಹಂಪನಾ’ ಕಾವ್ಯನಾಮದಿಂದ ಬರೆಯುವ ನಾಗರಾಜಯ್ಯ ಅವರು ಮೂಲತಃ ಗೌರಿಬಿದನೂರು ತಾಲ್ಲೂಕಿನ ಹಂಪಸಂದ್ರದವರು. ಸದ್ಯ ಬೆಂಗಳೂರು ನಗರದ ನಿವಾಸಿ. ತಂದೆ ತಂದೆ ಪದ್ಮನಾಭಯ್ಯ ಮತ್ತು ತಾಯಿ ಪದ್ಮಾವತಮ್ಮ. ಪ್ರಾಥಮಿಕ, ಆರಂಭಿಕ ಶಿಕ್ಷಣವನ್ನು ಗೌರಿಬಿದನೂರು, ಮಧುಗಿರಿಯಲ್ಲಿ ಪಡೆದ ಅವರು ತುಮಕೂರಿನಲ್ಲಿ ಇಂಟರ್ ಮೀಡಿಯೆಟ್ ಓದಿದರು. ಮೈಸೂರು ಮಹಾರಾಜಾ ಕಾಲೇಜಿನಿಂದ ಬಿ.ಎ. (ಆನರ್ಸ್), ಎಂ.ಎ ಪದವಿ ಪಡೆದ ನಾಗರಾಜಯ್ಯ ಅವರು ವಡ್ಡಾರಾಧನೆ ಕುರಿತು ಸಲ್ಲಿಸಿದ ಮಹಾಪ್ರಬಂಧಕ್ಕೆ ಪಿಎಚ್.ಡಿ. ಪದವಿ ಪಡೆದರು. ಮೈಸೂರಿನ ಮಹಾರಾಣಿ ಕಾಲೇಜಿನಲ್ಲಿ ಅಧ್ಯಾಪಕರಾಗಿ ವೃತ್ತಿಜೀವನ ಆರಂಭಿಸಿದ ಅವರು ...
READ MORE