‘ಛದ್ಮವೇಷ’ ಲೇಖಕ ಯತಿರಾಜ್ ವೀರಾಂಬುಧಿ ಅವರ ಕಾದಂಬರಿ. ಅಪರಾಧಿಗಳ ಲೋಕದಲ್ಲಿ ಓಡಾಡುವ ಹೆಣ್ಣಿನ ತುಮುಲಗಳನ್ನು ಈ ಕಾದಂಬರಿಯು ಮನೋಜ್ಞವಾಗಿ ಚಿತ್ರಿಸುತ್ತದೆ. ತೆರೆಯ ಮರೆಯಲ್ಲಿ ನಿರಂತರವಾಗಿ ಕೆಲಸ ಮಾಡುತ್ತಾ, ತನ್ನ ಇಷ್ಟಾನಿಷ್ಟಗಳನ್ನು ಮೀರಿ ನಿಂತು ವೃತ್ತಿಪರತೆಯನ್ನು ತೋರಿಸುವ ಹೆಣ್ಣಿನ ಹೆಣ್ತತದ ಒಳದನಿಗೆ ಈ ಕಾದಂಬರಿಯು ಮಾತುಗಳನ್ನು ನೀಡಿದೆ. ಜನಪ್ರಿಯ ನೆಲೆಯಲ್ಲಿ ನಿಂತುಕೊಂಡೇ ಬರೆಯುವ ಲೇಖಕರು, ಓದುಗರಿಗೆ ಜೀವನದ ಸೂಕ್ಷ್ಮಗಳನ್ನು, ಸತ್ಯಗಳನ್ನು ಮೆಲ್ಲನೆ ಪಿಸುಗುಡುತ್ತಾರೆ.
ಕಥೆಗಾರ,ಲೇಖಕ, ಅನುವಾದಕ, ಕಾದಂಬರಿಗಾರರಾದ ಯತಿರಾಜ್ ವೀರಾಂಬುಧಿ 11-08-1957ರಂದು ಮೈಸೂರಿನಲ್ಲಿ ಜನಿಸಿದರು. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣವನ್ನು ಮೈಸೂರಿನಲ್ಲೇ ಪೂರ್ಣಗೊಳಿಸಿದ ಅವರು ಮೈಸೂರು ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್‌ನಲ್ಲಿ ಬಿ.ಇ (ಎಲೆಕ್ಟ್ರಿಕಲ್ ಪವರ್) ಮುಗಿಸಿದರು. ಬೆಂಗಳೂರು ಮತ್ತು ಸಲ್ತನತ್ ಆಫ್ ಒಮಾನ್‌ನಲ್ಲಿ ಕಾರ್ಯ ನಿರ್ವಹಿಸಿ 2013ರಲ್ಲಿ ನಿವೃತ್ತಿ ಪಡೆದಿದ್ದಾರೆ. ಯತಿರಾಜ್ ವೀರಾಂಬುಧಿಯವರ ಪ್ರಕಟಿತ ಕೃತಿಗಳು- ಆಪತ್ತಿಗೆ ಆಹ್ವಾನ, ಪರಿಶೋಧ, ಗಾಥೆ, ಮರದಡಿ ಮಳೆ, ಪಂಚಾನನ, ಜೀವನ್ಮುಖಿ, ಸಾಬೀತು, ಕುರುಡು ತಿರುವು, ಅವಿನಾಭಾವ, ಹಸ್ತಕ್ಷೇಪ, ಹಾಸುಹೊಕ್ಕು, ಕಪ್ಪು ನದಿ, ಉದ್ಯೋಗ ಪರ್ವ, ಕರೆದರೆ ಬಾರೆ..!, ಒಂದೊಂದಾಗಿ ಜಾರಿದರೆ, ರಣವೀಳ್ಯ, ಚಿರಸ್ಮಿತ, ಸುಖಿಯಾಗಿರು ...
READ MORE