‘ಚಾಮರಸ’ ವಿ. ಸೀತಾರಾಮಯ್ಯ ಹಾಗೂ ಟಿ. ವಿ. ವೆಂಕಟಾಚಲ ಶಾಸ್ತ್ರಿ ಅವರು ಸಂಪಾದಿಸಿರುವ ಕೃತಿಯಾಗಿದೆ. ಈ ಕೃತಿಯಲ್ಲಿ ಚಾಮರಸ ಕವಿಯ ವೈಯಕ್ತಿಕ ಚರಿತ್ರೆ, ಆತನ ಕೃತಿಗಳು ಹೀಗೆ ಕವಿಯ ಬಗೆಗಿನ ಅನೇಕ ಸಂಗತಿಗಳನ್ನು ತಿಳಿಯಬಹುದು. ಜೀವನದ ಆದರ್ಶ ವತ್ತು ಗಂತವ್ಯಗಳ ನಿರ್ದೇಶನವಾಗುವಂತೆ ಕಥೆ ಪಾತ್ರ ಸನ್ನಿವೇಶಗಳ ನಿರ್ವಹಣವಿದೆ.
ಕವಿ, ವಿದ್ವಾಂಸ, ವಿಮರ್ಶಕ, ಕಲಾರಾಧಕರಾಗಿದ್ದ ವಿ. ಸೀತಾರಾಮಯ್ಯ ಕನ್ನಡ ನವೋದಯ ಸಾಹಿತ್ಯದ ಪ್ರಮುಖ ಲೇಖಕರರಲ್ಲಿ ಒಬ್ಬರು. ದೇವನಹಳ್ಳಿ ತಾಲ್ಲೂಕಿನ ಬೂದಿಗೆರೆಯಲ್ಲಿ 1899ರ ಅಕ್ಟೋಬರ್ 2ರಂದು ಜನಿಸಿದರು. ತಂದೆ ವೆಂಕಟರಾಮಯ್ಯ ಮತ್ತು ತಾಯಿ ದೊಡ್ಡ ವೆಂಕಮ್ಮ. ಬೆಂಗಳೂರಿನಲ್ಲಿ ಶಾಲಾ ವಿದ್ಯಾಭ್ಯಾಸ ಮುಗಿಸಿ ಮೈಸೂರಿನಲ್ಲಿ ಬಿ. ಎ. (1920), ಎಂ. ಎ. (1922) ಪದವಿ ಪಡೆದರು. ಮುಂಬಯಿಗೆ ತೆರಳಿ ಎಲ್. ಎಲ್.ಬಿ. ಪದವಿ ಗಳಿಸಿ ಮೈಸೂರಿಗೆ ಹಿಂತಿರುಗಿದರು. ಶಾರದಾ ವಿಲಾಸ ಕಾಲೇಜಿನಲ್ಲಿ ಉಪಾಧ್ಯಾಯ (1923) ರಾದರು. ಬೆಂಗಳೂರಿನ ಇಂಟರ್ ಮೀಡಿಯೇಟ್ ಕಾಲೇಜು, ಸೆಂಟ್ರಲ್ ಕಾಲೇಜು, ಮೈಸೂರು ಮಹಾರಾಜ ಕಾಲೇಜು, ಚಿಕ್ಕಮಗಳೂರಿನ ...
READ MORE